1 Peter 4:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೋಧಿಸುವವನು ದೇವರ ನುಡಿಗಳನ್ನೇ ಬೋಧಿಸಲಿ. ಸೇವೆ ಮಾಡುವವನು ದೇವರೇ ದಯಪಾಲಿಸಿದ ಶಕ್ತಿಯಿಂದ ಸೇವೆ ಮಾಡಲಿ. ನೀವು ಹೀಗೆ ಮಾಡಿದರೆ, ನೀವು ಮಾಡುವ ಪ್ರತಿಯೊಂದರಲ್ಲೂ ಯೇಸು ಕ್ರಿಸ್ತನ ಮೂಲಕ ದೇವರು ಸ್ತುತಿಸಲ್ಪಡುವನು. ಅಧಿಕಾರವೂ ಮಹಿಮೆಯೂ ಯುಗಯುಗಾಂತರಗಳಲ್ಲಿ ಆತನಿಗೆ ಸೇರಿದವುಗಳಾಗಿವೆ. ಆಮೆನ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.
Kannada BSI Bible 2016
ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.
Kannada Bible (KNCL) BSI 2016
ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.