1 Peter 4:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಕ್ರಿಸ್ತನನ್ನು ಅನುಸರಿಸುತ್ತಿರುವುದರ ನಿಮಿತ್ತವಾಗಿ ನಿಮ್ಮ ಬಗ್ಗೆ ಜನರು ಕೆಟ್ಟದ್ದನ್ನು ನುಡಿದರೆ ನೀವು ಭಾಗ್ಯವಂತರಾಗಿದ್ದೀರಿ. ತೇಜೋಮಯವಾದ ಆತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನೆ. ಆತನು ದೇವರಾತ್ಮನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.
Kannada BSI Bible 2016
ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಕ್ರಿಸ್ತನ ಹೆಸರಿನ ನಿವಿುತ್ತ ನಿಂದೆಗೆ ಗುರಿಯಾದರೆ ಧನ್ಯರೇ; ತೇಜೋಮಯವಾದ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.
Kannada Bible (KNCL) BSI 2016
ಕ್ರಿಸ್ತಯೇಸುವಿನ ನಾಮದ ನಿಮಿತ್ತ ನಿಂದೆ ಅವಮಾನಗಳಿಗೆ ಗುರಿಯಾದರೆ ನೀವು ಧನ್ಯರು! ಮಹಿಮಾನ್ವಿತ ದೇವರ ಆತ್ಮವು ನಿಮ್ಮಲ್ಲಿ ನೆಲಸಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ, ಧನ್ಯರು. ಏಕೆಂದರೆ, ಮಹಿಮೆಯ ಆತ್ಮರೂ, ದೇವರೂ ನಿಮ್ಮಲ್ಲಿ ವಾಸಿಸುತ್ತಾರೆ.