1 Peter 4:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ನ್ಯಾಯನಿರ್ಣಯದ ಕಾಲ ಬಂದಿದೆ. ಅದು ದೇವರ ಕುಟುಂಬದಿಂದಲೇ ಆರಂಭವಾಗುವುದು. ನಮ್ಮಲ್ಲಿಯೇ ಅದು ಆರಂಭವಾದರೆ, ದೇವರ ಸುವಾರ್ತೆಗೆ ವಿಧೇಯರಾಗದ ಜನರಿಗೆ ಏನಾಗಬಹುದು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?
Kannada BSI Bible 2016
ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
Kannada BSI JV (ಕನ್ನಡ ಸತ್ಯವೇದವು J.V. (BSI))
ನ್ಯಾಯವಿಚಾರಣೆಯ ಸಮಯ ಬಂದದೆ; ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಯಿತಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗಲು ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಗತಿ ಏನಾಗಬಹುದು?
Kannada Bible (KNCL) BSI 2016
ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು?