1 Peter 4:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ದೇವರ ಅಪೇಕ್ಷೆಯಂತೆ ಸಂಕಟಪಡುವವರು ತಮ್ಮ ಜೀವಾತ್ಮಗಳನ್ನು ಆತನಿಗೆ ಒಪ್ಪಿಸಿಕೊಡಬೇಕು. ಅವರನ್ನು ಸೃಷ್ಟಿಸಿದಾತನು ದೇವರೇ. ಆದ್ದರಿಂದ ಅವರು ಆತನಲ್ಲಿ ಭರವಸವಿಡತಕ್ಕದ್ದು. ಹೀಗಿರಲಾಗಿ ಅವರು ಒಳ್ಳೆಯದನ್ನು ಮಾಡುತ್ತಲೇ ಇರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.
Kannada BSI Bible 2016
ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.
Kannada Bible (KNCL) BSI 2016
ಆದ್ದರಿಂದ, ದೇವರ ಚಿತ್ತಾನುಸಾರ ಹಿಂಸೆಬಾಧೆಯನ್ನು ಅನುಭವಿಸುವವರು ತಮ್ಮ ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಸೃಷ್ಟಿಕರ್ತನಿಗೆ ಶರಣಾಗಲಿ. ಆತ ಅವರನ್ನೆಂದಿಗೂ ಕೈಬಿಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ತಮ್ಮ ಆತ್ಮಗಳನ್ನು ನಂಬಿಗಸ್ತ ಆಗಿರುವ ಸೃಷ್ಟಿಕರ್ತ ದೇವರಿಗೆ ಒಪ್ಪಿಸಿ, ಒಳ್ಳೆಯದನ್ನು ಮಾಡಲಿ.