1 Peter 4:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಈ ಲೋಕದಲ್ಲಿ ನೀವು ಜನರ ಅಪೇಕ್ಷೆಗೆ ತಕ್ಕಂತೆ ಕೆಟ್ಟಕಾರ್ಯಗಳನ್ನು ಮಾಡದೆ, ದೇವರು ಅಪೇಕ್ಷಿಸುವಂಥ ಕಾರ್ಯಗಳನ್ನೇ ಮಾಡುತ್ತಾ ಜೀವಿಸಲು ನಿಮ್ಮನ್ನು ಬಲಪಡಿಸಿಕೊಳ್ಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.
Kannada BSI Bible 2016
ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪದ ವಶದಿಂದ ತಪ್ಪಿಸಿಕೊಂಡವನಾಗಿ ಉಳಿದಿರುವ ತನ್ನ ಜೀವಮಾನಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವದಕ್ಕೆ ಪ್ರಯತ್ನಮಾಡುವನು.
Kannada Bible (KNCL) BSI 2016
ಉಳಿದಿರುವ ತನ್ನ ಜೀವಮಾನ ಕಾಲವನ್ನು ಲೌಕಿಕ ವ್ಯಾಮೋಹಗಳಲ್ಲಿ ಕಳೆಯದೆ ದೇವರ ಚಿತ್ತಕ್ಕನುಸಾರ ಕಳೆಯುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಥವರು ಉಳಿದಿರುವ ತಮ್ಮ ಭೂಲೋಕದ ಬಾಳಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವರು.