1 Peter 4:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು.
Kannada BSI Bible 2016
ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಬಂಡುತನ ದುರಾಶೆ ಕುಡಿಕತನ ದುಂದೌತಣ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಈ ಮೊದಲಾದವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವದರಲ್ಲಿಯೂ ಕಳೆದುಹೋದ ಕಾಲವೇ ಸಾಕು.
Kannada Bible (KNCL) BSI 2016
ಕ್ರೈಸ್ತರಲ್ಲದವರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಮಾಡಿದ್ದು ಸಾಕು. ಆಗ ನೀವು ಅಶ್ಲೀಲತೆ, ಕಾಮ, ಕುಡುಕುತನ, ಅಮಲೇರುವಿಕೆ, ದುಂದೌತಣ ಮತ್ತು ಯೋಗ್ಯವಲ್ಲದ ವಿಗ್ರಹಾರಾಧನೆ - ಈ ಮುಂತಾದವುಗಳಿಗೆ ಒಳಗಾಗಿದ್ದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರನ್ನು ಅರಿಯದ ಜನರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಸಾಕಷ್ಟು ಮಾಡಿದ್ದೀರಿ. ಆಗ ನೀವು ಅಶ್ಲೀಲತೆ, ದುರಾಶೆಗಳು, ಕುಡುಕತನ, ಅಮಲೇರುವಿಕೆ, ದುಂದು ಔತಣಗಳು, ಅಸಹ್ಯವಾದ ವಿಗ್ರಹಾರಾಧನೆಗಳು ಇವುಗಳನ್ನು ಮಾಡುತ್ತಿದ್ದೀರಿ.