1 Peter 4:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸತ್ತುಹೋಗಿರುವ ಜನರಿಗೂ ಸುವಾರ್ತೆಯನ್ನು ಉಪದೇಶಿಸಲಾಯಿತು. ಅವರು ಶರೀರಸಂಬಂಧವಾಗಿ ಮರಣದಂಡನೆಗೆ ಗುರಿಯಾಗಿದ್ದರೂ ಸಹ ಆತ್ಮ ಸಂಬಂಧವಾಗಿ ದೇವರಂತೆ ಸದಾಕಾಲ ಜೀವಿಸಲೆಂದೇ ಅವರಿಗೆ ಉಪದೇಶಿಸಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಗಳಲ್ಲಿದ್ದಾಗ ಹೊಂದಿದರು. ಅವರು ಆತ್ಮ ಸಂಬಂಧವಾಗಿ ದೇವರಂತೆ ಜೀವಿಸಲೆಂದು ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟಿತು.
Kannada BSI Bible 2016
ಈ ಕಾರಣದಿಂದ ಸತ್ತಿರುವವರು ಶರೀರದಲ್ಲಿ ಮನುಷ್ಯರಿಗೆ ತಕ್ಕಂತೆ ನ್ಯಾಯತೀರ್ಪನ್ನು ಹೊಂದಿ ಆತ್ಮದಲ್ಲಿ ದೇವರಿಗಾಗಿ ಜೀವಿಸುವಂತೆ ಅವರಿಗೂ ಸುವಾರ್ತೆ ಸಾರಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಿಗಳಾಗಿದ್ದಾಗ ಹೊಂದಿದರು; ಅವರು ಆತ್ಮ ಸಂಬಂಧವಾಗಿ ದೇವರ ಜೀವದಲ್ಲಿ ಪಾಲುಗಾರರಾಗುವಂತೆ ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟತು.
Kannada Bible (KNCL) BSI 2016
ಮೃತರಿಗೂ ಶುಭಸಂದೇಶವನ್ನು ಬೋಧಿಸಲಾಯಿತು. ಏಕೆಂದರೆ, ದೇಹದ ಮಟ್ಟಿಗೆ ಸಕಲ ಮಾನವರಂತೆ ಮರಣವೆಂಬ ತೀರ್ಪನ್ನು ಹೊಂದಿದ್ದರೂ ದೇವರ ಆತ್ಮದ ಮಟ್ಟಿಗೆ ದೇವರಂತೆಯೇ ಜೀವಿಸಲೆಂದು ಆ ಸಂದೇಶವನ್ನು ಬೋಧಿಸಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕಾರಣದಿಂದಲೇ ಈಗ ಸತ್ತಿರುವವರಿಗೂ ಸಹ ಬದುಕಿದ್ದಾಗ ಸುವಾರ್ತೆ ಸಾರಲಾಯಿತು. ಆದ್ದರಿಂದ ಎಲ್ಲಾ ಮನುಷ್ಯರಿಗೆ ನೇಮಿಸಿದ ನ್ಯಾಯತೀರ್ಪಿನಂತೆ ಅವರು ದೇಹದಲ್ಲಿ ಮರಣ ಹೊಂದಿದ್ದರೂ, ತಮ್ಮ ಆತ್ಮದಲ್ಲಿ ದೇವರಿಗಾಗಿ ಜೀವಿಸುವರು.