1 Peter 5:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಸಭಾಹಿರಿಯರಿಗೆ ನಾನು ಈಗ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾನೂ ಒಬ್ಬ ಹಿರಿಯನಾಗಿದ್ದೇನೆ. ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ನೋಡಿದ್ದೇನೆ. ನಮಗೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ನಾನೂ ಪಾಲುಗಾರನಾಗಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,
Kannada BSI Bible 2016
ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ ಇನ್ನು ಮುಂದೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಎಚ್ಚರಿಸಿ ಹೇಳುವದೇನಂದರೆ -
Kannada Bible (KNCL) BSI 2016
ಕ್ರಿಸ್ತಯೇಸುವಿನ ಮರಣ -ಯಾತನೆಯನ್ನು ಕಣ್ಣಾರೆ ಕಂಡವನೂ ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಭಾಗಿಯಾಗಲಿರುವವನೂ ಸಭಾಪ್ರಮುಖನೂ ಆದ ನಾನು, ನಿಮ್ಮಲ್ಲಿ ಪ್ರಮುಖರಾದ ಇತರರನ್ನು ಪ್ರೋತ್ಸಾಹಿಸಿ ವಿನಂತಿಸುವುದೇನೆಂದರೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು.