1 Peter 5:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.
Kannada BSI Bible 2016
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.
Kannada Bible (KNCL) BSI 2016
ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.