1 Peter 5:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಈ ಕಿರುಪತ್ರವನ್ನು ಸಿಲ್ವಾನನ ನೆರವಿನಿಂದ ಬರೆದೆನು. ಅವನು ಕ್ರಿಸ್ತನಲ್ಲಿ ನಂಬಿಗಸ್ತನಾದ ಸಹೋದರನೆಂಬುದು ನನಗೆ ತಿಳಿದಿದೆ. ನಾನು ನಿಮ್ಮನ್ನು ಸಂತೈಸಲು ಮತ್ತು ಪ್ರೋತ್ಸಾಹಿಸಲು ಈ ಪತ್ರವನ್ನು ಬರೆದೆನು. ಇದುವೇ ದೇವರ ನಿಜವಾದ ಕೃಪೆ ಎಂಬುದನ್ನು ನಿಮಗೆ ತಿಳಿಸಬೇಕೆಂಬುದೇ ನನ್ನ ಅಪೇಕ್ಷೆಯಾಗಿತ್ತು. ಆ ಕೃಪೆಯಲ್ಲಿ ಸ್ಥಿರತೆಯಿಂದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.
Kannada BSI Bible 2016
ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಾನು ಸಂಕ್ಷೇಪವಾಗಿ ಬರೆದು ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.
Kannada Bible (KNCL) BSI 2016
ನನ್ನ ಈ ಪುಟ್ಟ ಪತ್ರವನ್ನು ನಂಬಿಕಸ್ಥ ಸಹೋದರನಾದ ಸಿಲ್ವಾನನ ಸಹಾಯದಿಂದ ನಿಮಗೆ ಬರೆದಿರುತ್ತೇನೆ. ನಿಮ್ಮನ್ನು ಪ್ರೋತ್ಸಾಹಿಸಲೆಂದು ಮತ್ತು ಇದುವೇ ದೇವರ ನಿಜವಾದ ಅನುಗ್ರಹವೆಂದು ಸ್ಪಷ್ಟೀಕರಿಸಲು ಬರೆದಿದ್ದೇನೆ. ಈ ಅನುಗ್ರಹದಲ್ಲಿ ನೀವು ದೃಢವಾಗಿ ನಿಲ್ಲಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಿಮಗೆ ನಂಬಿಗಸ್ತ ಆಗಿರುವ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಸಹಾಯದಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.