1 Peter 5:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.
Kannada BSI Bible 2016
ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ ದೇವರ ಚಿತ್ತದ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚವಾದ ದ್ರವ್ಯಾಶೆಯಿಂದಲ್ಲ ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆಮಾಡಿರಿ.
Kannada Bible (KNCL) BSI 2016
ನನ್ನ ಜೊತೆಹಿರಿಯರೇ, ದೇವರು ನಿಮಗೆ ವಹಿಸಿಕೊಟ್ಟಿರುವ ಮಂದೆಯನ್ನು ಕಾಯಿರಿ. ಕಡ್ಡಾಯದಿಂದಲ್ಲ, ದೇವರ ಚಿತ್ತಾನುಸಾರ ಅಕ್ಕರೆಯಿಂದ ಕಾಯಿರಿ. ದ್ರವ್ಯದ ದುರಾಶೆಯಿಂದಲ್ಲ, ಸೇವಾಸಕ್ತಿಯಿಂದ ಕಾಯಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ, ಆದರೆ ದೇವರ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆ ಮಾಡಿರಿ.