1 Peter 5:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸ್ವಸ್ಥಚಿತ್ತರಾಗಿರಿ ಮತ್ತು ಎಚ್ಚರವಾಗಿರಿ! ಸೈತಾನನು ನಿಮ್ಮ ಶತ್ರು. ಗರ್ಜಿಸುವ ಸಿಂಹವು ಯಾರನ್ನು ತಿನ್ನಲಿ ಎಂದು ಹುಡುಕುತ್ತಿರುವಂತೆ ಅವನು ಮನುಷ್ಯನನ್ನು ಹುಡುಕುತ್ತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.
Kannada BSI Bible 2016
ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
Kannada Bible (KNCL) BSI 2016
ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.