1 Samuel 1:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.
Kannada BSI Bible 2016
ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ನಿನಗೆ ಪ್ರತಿಷ್ಠಿಸಿಕೊಡುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಬರಗೊಡುವದಿಲ್ಲ ಎಂದು ಪ್ರಾರ್ಥಿಸಿ ಹರಕೆಮಾಡಿದಳು.
Kannada Bible (KNCL) BSI 2016
“ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹರಕೆಮಾಡಿ, “ಸೇನಾಧೀಶ್ವರ ಯೆಹೋವ ದೇವರೇ, ನೀವು ನಿಶ್ಚಯವಾಗಿ ನಿಮ್ಮ ದಾಸಿಯ ದೀನತೆಯನ್ನು ಕಂಡು, ನಿಮ್ಮ ದಾಸಿಯನ್ನು ಮರೆಯದೆ, ನನ್ನನ್ನು ನೆನಸಿ, ನಿಮ್ಮ ದಾಸಿಗೆ ಗಂಡು ಮಗುವನ್ನು ಕೊಟ್ಟರೆ, ಅವನು ಬದುಕುವ ಸಕಲ ದಿವಸಗಳಲ್ಲಿ ಅವನನ್ನು ಯೆಹೋವ ದೇವರಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರಿಕನ ಕತ್ತಿ ಬೀಳುವುದಿಲ್ಲ,” ಎಂದಳು.