1 Samuel 1:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹನ್ನಳು ಬಹಳ ಹೊತ್ತಿನವರೆಗೆ ಯೆಹೋವನಿಗೆ ಪ್ರಾರ್ಥನೆ ಮಾಡಿದಳು. ಅವಳು ಪ್ರಾರ್ಥನೆ ಮಾಡುತ್ತಿದ್ದಾಗ ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಬಹಳ ಹೊತ್ತಿನ ವರೆಗೆ ಯೆಹೋವನ ಮುಂದೆ ಪ್ರಾರ್ಥನೆಮಾಡುತ್ತಿರುವಾಗ ಏಲಿಯು ಆಕೆಯ ಬಾಯನ್ನೇ ನೋಡುತ್ತಿದ್ದನು.
Kannada BSI Bible 2016
ಅವಳು ಕರ್ತನ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಬಲು ಹೊತ್ತಿನವರೆಗೆ ಯೆಹೋವನ ಮುಂದೆ ಪ್ರಾರ್ಥನೆ ಮಾಡುತ್ತಿರುವಾಗ ಏಲಿಯು ಆಕೆಯ ಬಾಯನ್ನೇ ನೋಡುತ್ತಿದ್ದನು.
Kannada Bible (KNCL) BSI 2016
ಹನ್ನಳು ಬಹಳ ಹೊತ್ತಿನವರೆಗೆ ಸರ್ವೇಶ್ವರನ ಮುಂದೆ ಪ್ರಾರ್ಥನೆ ಸಲ್ಲಿಸುತ್ತಾ ಇದ್ದಳು. ಏಲಿ ಆಕೆಯ ಬಾಯನ್ನು ಗಮನಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಯೆಹೋವ ದೇವರ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ, ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.