1 Samuel 1:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಕಾನನ ಕುಟುಂಬದವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ, ರಾಮಾತದಲ್ಲಿದ್ದ ತಮ್ಮ ಮನೆಗೆ ಹಿಂದಿರುಗಿದರು. ಎಲ್ಕಾನನು ಹನ್ನಳನ್ನು ಕೂಡಿದನು. ಯೆಹೋವನು ಹನ್ನಳನ್ನು ಜ್ಞಾಪಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳೊಂದಿಗೆ ಸಂಗಮಿಸಲು, ಯೆಹೋವನು ಆಕೆಯ ಪ್ರಾರ್ಥನೆಯನ್ನು ಪರಿಗಣಿಸಿದ್ದರಿಂದ ಆಕೆಯು ಗರ್ಭಿಣಿಯಾದಳು.
Kannada BSI Bible 2016
ಅವರು ಉದಯದಲ್ಲಿ ಎದ್ದು ಕರ್ತನ ಮುಂದೆ ಆರಾಧಿಸಿ ಹಿಂತಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಿದನು; ಆಗ ಕರ್ತನು ಅವಳನ್ನು ಜ್ಞಾಪಕಮಾಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಲು ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ
Kannada Bible (KNCL) BSI 2016
ಮಾರನೆಯ ದಿನ ಬೆಳಿಗ್ಗೆ ಅವರೆಲ್ಲರು ಎದ್ದು ಸರ್ವೇಶ್ವರನನ್ನು ಆರಾಧಿಸಿ ರಾಮಾದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಲು ಆಕೆ ಸರ್ವೇಶ್ವರನ ಅನುಗ್ರಹದಿಂದ ಗರ್ಭಿಣಿ ಆದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಉದಯದಲ್ಲಿ ಎದ್ದು, ಯೆಹೋವ ದೇವರನ್ನು ಆರಾಧಿಸಿ, ಹಿಂದಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಸಂಗಮಿಸಲು, ಆಗ ಯೆಹೋವ ದೇವರು ಅವಳನ್ನು ಜ್ಞಾಪಕಮಾಡಿಕೊಂಡರು.