1 Samuel 1:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಹನ್ನಳು ಹೋಗಲಿಲ್ಲ. ಅವಳು ಎಲ್ಕಾನನಿಗೆ, “ಮಗುವು ಗಟ್ಟಿಯಾದ ಊಟಮಾಡುವ ತನಕ ನಾನು ಬರುವುದಿಲ್ಲ. ಅವನು ದೊಡ್ಡವನಾದ ಮೇಲೆ ನಾನೇ ಶೀಲೋವಿಗೆ ಕರೆದೊಯ್ದು ಯೆಹೋವನಿಗೆ ಒಪ್ಪಿಸುತ್ತೇನೆ. ಅವನು ನಾಜೀರನಾಗುತ್ತಾನೆ. ಅವನು ಯಾವಾಗಲೂ ಶೀಲೋವಿನಲ್ಲಿಯೇ ಇರುತ್ತಾನೆ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಮಗನು ಮೊಲೆಬಿಡುವ ವರೆಗೂ ನಾನು ಬರುವುದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಅವನನ್ನು ಕರೆದುಕೊಂಡು ಬರುವೆನು” ಎಂದು ಹೇಳಿದಳು.
Kannada BSI Bible 2016
ಅವನು ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಅಲ್ಲಿ ಎಂದೆಂದಿಗೂ ಇರುವದಕ್ಕೆ ನಾನು ಅವನನ್ನು ಆಗ ತಕ್ಕೊಂಡು ಬರುವೆನು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಗನು ಮೊಲೆಬಿಡುವವರೆಗೂ ನಾನು ಬರುವದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುವೆನು ಎಂದು ಹೇಳಿದಳು.
Kannada Bible (KNCL) BSI 2016
ಹನ್ನಳು, “ಮಗನು ಮೊಲೆಬಿಡುವವರೆಗೂ ನಾನು ಬರುವುದಿಲ್ಲ; ಅವನು ಸರ್ವೇಶ್ವರನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಬಾಳಿನುದ್ದಕ್ಕೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುತ್ತೇನೆ,” ಎಂದು ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹನ್ನಳು ಹೋಗದೆ ತನ್ನ ಗಂಡನಿಗೆ, “ಮಗುವು ಎದೆಹಾಲು ಕುಡಿಯುವುದನ್ನು ಬಿಡುವವರೆಗೂ ನಾನು ಬರುವುದಿಲ್ಲ. ಅವನು ಯೆಹೋವ ದೇವರ ಸನ್ನಿಧಿಯ ದರ್ಶನಕ್ಕೂ ಅಲ್ಲಿ ಎಂದೆಂದಿಗೂ ಇರುವುದಕ್ಕೂ ನಾನು ಅವನನ್ನು ಆಮೇಲೆ ತೆಗೆದುಕೊಂಡು ಬರುವೆನು,” ಎಂದಳು.