1 Samuel 1:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹನ್ನಳು, “ಸ್ವಾಮೀ, ನನ್ನನ್ನು ಕ್ಷಮಿಸಿ. ನಿಮ್ಮ ಬಳಿ ನಿಂತಿರುವ ನಾನೇ ಅಂದು ಯೆಹೋವನಿಗೆ ಪ್ರಾರ್ಥನೆ ಮಾಡಿದವಳು. ನಾನು ಹೇಳುತ್ತಿರುವುದು ನಿಜವೆಂದು ಪ್ರಮಾಣ ಮಾಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹನ್ನಳು ಏಲಿಗೆ “ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ, ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ.
Kannada BSI Bible 2016
ಅವಳು ಹೇಳಿದ್ದೇನಂದರೆ--ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ನನ್ನ ಒಡೆಯನೇ, ಕರ್ತನಿಗೆ ಪ್ರಾರ್ಥನೆಮಾಡಿ ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹನ್ನಳು ಏಲಿಗೆ - ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ.
Kannada Bible (KNCL) BSI 2016
ಹನ್ನಳು ಏಲಿಗೆ, “ಸ್ವಾಮೀ, ನಿಮ್ಮ ಜೀವದಾಣೆ, ಹಿಂದೊಮ್ಮೆ ಸರ್ವೇಶ್ವರನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ ಇಲ್ಲಿ ನಿಮ್ಮ ಹತ್ತಿರ ನಿಂತಿದ್ದ ಮಹಿಳೆ ನಾನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ಇಲ್ಲಿ ಯೆಹೋವ ದೇವರಿಗೆ ಪ್ರಾರ್ಥನೆಮಾಡಿ, ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು.