1 Samuel 1:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗ ನಾನು ಈ ಮಗನನ್ನು ಯೆಹೋವನಿಗೆ ಒಪ್ಪಿಸುತ್ತೇನೆ. ಇವನು ಜೀವದಿಂದಿರುವ ತನಕ ಯೆಹೋವನಿಗೆ ಪ್ರತಿಷ್ಠಿತನಾಗಿರುತ್ತಾನೆ” ಎಂದು ಏಲಿಗೆ ಹೇಳಿದಳು. ಬಳಿಕ ಹನ್ನಳು ಆ ಬಾಲಕನನ್ನು ಅಲ್ಲಿಯೇ ಬಿಟ್ಟು ಯೆಹೋವನನ್ನು ಆರಾಧಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು” ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು.
Kannada BSI Bible 2016
ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು ಎಂದು ಹೇಳಿದಳು. ಆಮೇಲೆ ಅವರು ಯೆಹೋವನಿಗೆ ನಮಸ್ಕರಿಸಿದರು.
Kannada Bible (KNCL) BSI 2016
ಇವನನ್ನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟಿದ್ದೇನೆ. ಬದುಕಿರುವ ತನಕ ಇವನು ಅವರಿಗೇ ಪ್ರತಿಷ್ಠಿತನು,” ಎಂದು ಹೇಳಿದಳು. ಬಳಿಕ ಅವರು ಸರ್ವೇಶ್ವರಸ್ವಾಮಿಯನ್ನು ಆರಾಧಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಾನು ಅವನನ್ನು ಯೆಹೋವ ದೇವರಿಗೆ ಒಪ್ಪಿಸಿದ್ದೇನೆ. ಅವನು ಜೀವಿಸಿರುವವರೆಗೆ ಯೆಹೋವ ದೇವರಿಗೆ ಸಮರ್ಪಿತನಾಗಿರುವನು,” ಎಂದಳು. ಆಮೇಲೆ ಅವರೆಲ್ಲರೂ ಅಲ್ಲಿ ಯೆಹೋವ ದೇವರನ್ನು ಆರಾಧಿಸಿದರು.