1 Samuel 1:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಕಾನನು ಪ್ರತಿ ವರ್ಷವೂ ತನ್ನ ಪಟ್ಟಣವಾದ ರಾಮಾತವನ್ನು ಬಿಟ್ಟು ಶೀಲೋವಿಗೆ ಹೋಗುತ್ತಿದ್ದನು. ಅವನು ಶೀಲೋವಿನಲ್ಲಿ ಸರ್ವಶಕ್ತನಾದ ಯೆಹೋವನನ್ನು ಆರಾಧಿಸಿ ಆತನಿಗೆ ಯಜ್ಞವನ್ನು ಅರ್ಪಿಸುತ್ತಿದ್ದನು. ಹೊಫ್ನಿ ಮತ್ತು ಫೀನೆಹಾಸರೆಂಬ ಯಾಜಕರು ಯೆಹೋವನ ಸೇವೆಮಾಡುವ ಸ್ಥಳವೇ ಶೀಲೋವ. ಹೊಫ್ನಿ ಮತ್ತು ಫೀನೆಹಾಸರು ಏಲಿಯನ ಮಕ್ಕಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಪ್ರತಿವರ್ಷವೂ ಸೇನಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವುದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು.
Kannada BSI Bible 2016
ಅವನು ಸೈನ್ಯಗಳ ಕರ್ತ ನನ್ನು ಆರಾಧಿಸುವದಕ್ಕೂ ಆತನಿಗೆ ಬಲಿಯನ್ನು ಅರ್ಪಿಸುವದಕ್ಕೂ ಪ್ರತಿ ವರುಷ ತನ್ನ ಪಟ್ಟಣದಿಂದ ಶೀಲೋವಿಗೆ ಹೋಗುತ್ತಿದ್ದನು. ಕರ್ತನ ಯಾಜಕ ರಾದ ಹೊಫ್ನಿಯೂ ಫೀನೆಹಾಸನೂ ಎಂಬ ಏಲಿಯ ಮಕ್ಕಳಿಬ್ಬರು ಅಲ್ಲಿ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪ್ರತಿವರುಷವೂ ಸೈನ್ಯಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯ ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು.
Kannada Bible (KNCL) BSI 2016
ಎಲ್ಕಾನನು ಪ್ರತಿ ವರ್ಷ ರಾಮಾದಿಂದ ಶಿಲೋವಿಗೆ ಹೋಗಿ ಸೇನಾಧೀಶ್ವರರಾದ ಸರ್ವೇಶ್ವರಸ್ವಾಮಿಗೆ ಬಲಿದಾನವನ್ನು ಸಮರ್ಪಿಸಿ ಆರಾಧಿಸುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ಸರ್ವೇಶ್ವರನ ಯಾಜಕರಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಶೀಲೋವಿನಲ್ಲಿ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸಲೂ, ಅವರಿಗೆ ಬಲಿಯನ್ನು ಅರ್ಪಿಸಲೂ ಪ್ರತಿವರ್ಷ ಪಟ್ಟಣದಿಂದ ಹೋಗುತ್ತಿದ್ದನು. ಯೆಹೋವ ದೇವರ ಯಾಜಕ ಏಲಿಯ ಮಕ್ಕಳಿಬ್ಬರಾದ ಹೊಫ್ನಿಯೂ, ಫೀನೆಹಾಸನೂ ಅಲ್ಲಿ ಇದ್ದರು.