1 Samuel 1:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಕಾನನು ಪ್ರತಿಸಲ ಯಜ್ಞವನ್ನು ಅರ್ಪಿಸುವಾಗ, ಪೆನಿನ್ನಳಿಗೆ ಯಜ್ಞದ ಒಂದು ಭಾಗವನ್ನೂ ಅವಳ ಮಕ್ಕಳಿಗೆ ಒಂದು ಭಾಗವನ್ನೂ ಕೊಡುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಕಾನನು ಯಜ್ಞವನ್ನರ್ಪಿಸಿದಾಗೆಲ್ಲಾ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲಾ ಗಂಡು ಹೆಣ್ಣುಮಕ್ಕಳಿಗೂ ಭಾಗಗಳನ್ನು ಕೊಡುತ್ತಿದ್ದನು.
Kannada BSI Bible 2016
ಎಲ್ಕಾನನು ಬಲಿಯನ್ನು ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿಯಾದ ಪೆನಿನ್ನಳಿಗೂ ಅವಳ ಎಲ್ಲಾ ಕುಮಾರರಿಗೂ ಕುಮಾರ್ತೆ ಯರಿಗೂ ಪಾಲನ್ನು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಕಾನನು ಯಜ್ಞವನ್ನರ್ಪಿಸಿದಾಗೆಲ್ಲಾ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲಾ ಗಂಡು ಹೆಣ್ಣು ಮಕ್ಕಳಿಗೂ ಭಾಗಗಳನ್ನು ಕೊಡುತ್ತಿದ್ದನು.
Kannada Bible (KNCL) BSI 2016
ಎಲ್ಕಾನನು ಬಲಿಯರ್ಪಿಸಿದಾಗಲೆಲ್ಲಾ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲ ಗಂಡು-ಹೆಣ್ಣು ಮಕ್ಕಳಿಗೂ ಬಲಿಭೋಜನದ ಒಂದೊಂದು ಭಾಗವನ್ನು ಕೊಡುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಕಾನನು ಬಲಿ ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿ ಪೆನಿನ್ನಳಿಗೂ, ಅವಳ ಸಮಸ್ತ ಪುತ್ರಪುತ್ರಿಯರಿಗೂ ಪಾಲನ್ನು ಕೊಡುತ್ತಿದ್ದನು.