1 Samuel 1:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಕಾನನು ಹನ್ನಳಿಗೆ ಯಾವಾಗಲೂ ಎರಡು ಭಾಗವನ್ನು ಕೊಡುತ್ತಿದ್ದನು. ಯೆಹೋವನು ಹನ್ನಳಿಗೆ ಮಕ್ಕಳನ್ನು ಕೊಡದೇ ಇದ್ದರೂ, ಎಲ್ಕಾನನು ಎರಡು ಭಾಗವನ್ನು ಕೊಡುತ್ತಿದ್ದನು. ಎಲ್ಕಾನನು ಹನ್ನಳನ್ನು ಬಹಳವಾಗಿ ಪ್ರೀತಿಸುತ್ತಿದ್ದ ಕಾರಣ ಹೀಗೆ ಮಾಡುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ, ಯೆಹೋವನು ಆಕೆಯ ಗರ್ಭವನ್ನು ಮುಚ್ಚಿದ್ದರಿಂದ ಅವನು ಆಕೆಗೆ ಎರಡು ಭಾಗವನ್ನು ಕೊಡುತ್ತಿದ್ದನು.
Kannada BSI Bible 2016
ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ ಯೆಹೋವನು ಆಕೆಗೆ ಮಕ್ಕಳನ್ನು ಕೊಡಲಿಲ್ಲವಾದದರಿಂದ ಆಕೆಗೆ ಒಂದು ಭಾಗವನ್ನು ಮಾತ್ರ ಕೊಡುತ್ತಿದ್ದನು.
Kannada Bible (KNCL) BSI 2016
ಅವನು ಹನ್ನಳನ್ನು ಬಹಳವಾಗಿ ಪ್ರೀತಿಸುತ್ತಿದ್ದರೂ ಒಂದು ಭಾಗವನ್ನು ಮಾತ್ರ ಆಕೆಗೆ ಕೊಡುತ್ತಾ ಇದ್ದನು. ಏಕೆಂದರೆ ಸರ್ವೇಶ್ವರ ಆಕೆಗೆ ಮಕ್ಕಳನ್ನು ಕೊಟ್ಟಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಹನ್ನಳನ್ನು ಪ್ರೀತಿಸಿದ್ದರಿಂದ ಹನ್ನಳಿಗೆ ಎರಡಷ್ಟು ಪಾಲನ್ನು ಕೊಡುತ್ತಿದ್ದನು. ಆದರೆ ಯೆಹೋವ ದೇವರು ಹನ್ನಳ ಗರ್ಭವನ್ನು ಮುಚ್ಚಿಬಿಟ್ಟಿದ್ದರು.