1 Samuel 1:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವಳ ಗಂಡನಾದ ಎಲ್ಕಾನನು ಅವಳನ್ನು ಕುರಿತು, “ಹನ್ನಾ, ಯಾಕೆ ಅಳುತ್ತಿರುವೆ? ಯಾಕೆ ಊಟಮಾಡುತ್ತಿಲ್ಲ? ಯಾಕೆ ವ್ಯಸನದಿಂದಿರುವೆ? ನಿನಗೆ ನಾನಿಲ್ಲವೇ? ನಾನು ನಿನ್ನ ಗಂಡ. ನಾನು ನಿನಗೆ ಹತ್ತು ಗಂಡುಮಕ್ಕಳಿಗಿಂತಲೂ ಹೆಚ್ಚಾಗಿದ್ದೇನಲ್ಲಾ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ “ಹನ್ನಾ, ಏಕೆ ಅಳುತ್ತೀ? ಊಟ ಮಾಡದಿರುವುದಕ್ಕೆ ಕಾರಣವೇನು? ನೀನು ವ್ಯಸನಪಡುವುದೇಕೆ? ನಾನು ನಿನಗೆ ಹತ್ತು ಮಂದಿ ಗಂಡು ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ” ಅಂದನು.
Kannada BSI Bible 2016
ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆ--ಹನ್ನಳೇ, ಯಾಕೆ ಅಳುತ್ತೀ? ಯಾಕೆ ತಿನ್ನದೆ ಇದ್ದೀ? ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ? ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ - ಹನ್ನಾ, ಏಕೆ ಅಳುತ್ತೀ? ಉಣ್ಣದಿರುವದಕ್ಕೇನು ಕಾರಣ? ನೀನು ವ್ಯಸನಪಡುವದೇಕೆ? ನಾನು ನಿನಗೆ ಹತ್ತು ಮಂದಿ ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ ಅಂದನು.
Kannada Bible (KNCL) BSI 2016
ಆಗ ಆಕೆಯ ಗಂಡ ಎಲ್ಕಾನನು ಆಕೆಗೆ, “ಹನ್ನಾ, ಏಕೆ ಅಳುತ್ತಿರುವೆ? ಊಟಮಾಡದಿರುವುದಕ್ಕೆ ಕಾರಣ ಏನು? ವ್ಯಸನಪಡುವುದು ಏಕೆ? ಹತ್ತು ಮಕ್ಕಳಿಗಿಂತಲು ನಾನು ನಿನಗೆ ಹೆಚ್ಚಲ್ಲವೆ?” ಎಂದನು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವಳ ಗಂಡ ಎಲ್ಕಾನನು ಅವಳಿಗೆ, “ಹನ್ನಳೇ, ಏಕೆ ಅಳುತ್ತೀ? ಏಕೆ ಊಟಮಾಡದೆ ಇದ್ದೀ? ನಿನ್ನ ಮನ ಏಕೆ ಕುಂದಿದೆ? ಹತ್ತು ಮಂದಿ ಪುತ್ರರಿಗಿಂತ ನಾನು ನಿನಗೆ ಹೆಚ್ಚಲ್ಲವೆ?” ಎಂದನು.