1 Samuel 10:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.
Kannada BSI Bible 2016
ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಆಳು ಮುಂದೆ ಹೋದಾಗ ಸಮುವೇಲನು ಎಣ್ಣೇ ಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ - ಯೆಹೋವನು ತನ್ನ ಸ್ವಾಸ್ತ್ಯದ ಮೇಲೆ ಪ್ರಭುವಾಗಿರುವದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.
Kannada Bible (KNCL) BSI 2016
ಆ ಆಳು ಮುಂದೆ ಹೋದಾದ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, “ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯ ಆಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಮುಯೇಲನು ಎಣ್ಣೆಕುಪ್ಪಿಯಿಂದ ಅವನ ತಲೆಯ ಮೇಲೆ ಸುರಿದು, ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವ ದೇವರು ನಿನ್ನನ್ನು ತಮ್ಮ ಆಸ್ತಿಯಾಗಿರುವ ಜನರ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾರೆ.