1 Samuel 10:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನನ್ನು ಮೊದಲು ನೋಡಿದ್ದ ಜನರು, ಪ್ರವಾದಿಗಳ ಜೊತೆಯಲ್ಲಿ ಸೌಲನು ಪ್ರವಾದಿಸುತ್ತಿರುವುದನ್ನು ಕಂಡರು. ಈ ಜನರು, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನಾದನೇ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಪರವಶನಾಗಿ ಮಾತನಾಡುವುದನ್ನು ಅವನ ಪರಿಚಿತರು ಕಂಡು ತಮ್ಮ ತಮ್ಮೊಳಗೆ, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನೋ?” ಎಂದು ಮಾತನಾಡಿಕೊಳ್ಳುತ್ತಿದ್ದರು.
Kannada BSI Bible 2016
ಅದಕ್ಕೆ ಮುಂಚೆ ಅವನನ್ನು ತಿಳಿದವರೆಲ್ಲರು ಅವನು ಪ್ರವಾದಿಗಳ ಸಂಗಡ ಇದ್ದು ಪ್ರವಾದಿಸುವದನ್ನು ಕಂಡಾಗ ಅವರು ಒಬ್ಬರ ಸಂಗಡ ಒಬ್ಬರು--ಕೀಷನ ಮಗನಿಗೆ ಬಂದದ್ದು ಇದೇನು? ಸೌಲನೂ ಸಹ ಪ್ರವಾದಿಗಳಲ್ಲಿ ಇದ್ದಾನೋ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪರವಶನಾಗಿ ಮಾತಾಡುವದನ್ನು ಗುರುತಿನವರು ಕಂಡು ತಮ್ಮ ತಮ್ಮೊಳಗೆ - ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿದ್ದಾನೋ ಎಂದು ಮಾತಾಡಿಕೊಳ್ಳುತ್ತಿರುವಾಗ
Kannada Bible (KNCL) BSI 2016
ಅವನು ಪರವಶನಾಗಿ ಮಾತಾಡುವುದನ್ನು ಪರಿಚಿತರು ಕಂಡು ತಮ್ಮತಮ್ಮೊಳಗೆ, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನೆ?” ಎಂದು ಮಾತಾಡಿಕೊಳ್ಳುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಮುಂಚೆ ಅವನನ್ನು ತಿಳಿದವರೆಲ್ಲರು, ಅವನು ಪ್ರವಾದಿಗಳ ಸಂಗಡವಿದ್ದು ಪ್ರವಾದಿಸುವುದನ್ನು ಕಂಡಾಗ, ಅವರು ಒಬ್ಬರ ಸಂಗಡ ಒಬ್ಬರು, “ಕೀಷನ ಮಗನಿಗೆ ಆದದ್ದೇನು? ಸೌಲನೂ ಸಹ ಪ್ರವಾದಿಗಳಲ್ಲಿ ಇದ್ದಾನೋ?” ಎಂದರು.