1 Samuel 10:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಗಿಬಿಯತ್ ಎಲೋಹಿಮಿನಲ್ಲಿ ವಾಸಿಸುತ್ತಿದ್ದ ಮನುಷ್ಯನೊಬ್ಬನು, “ಹೌದು, ಅವನು ಅವರ ನಾಯಕನಂತೆ ಕಾಣುತ್ತಿದ್ದಾನೆ” ಎಂದು ಹೇಳಿದನು. ಆದ್ದರಿಂದಲೇ, “ಸೌಲನೂ ಪ್ರವಾದಿಗಳಲ್ಲಿ ಒಬ್ಬನಾದನು” ಎಂಬ ಗಾದೆಯು ಹುಟ್ಟಿಕೊಂಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ಸ್ಥಳದವನೊಬ್ಬನು, “ಹಾಗಾದರೆ ಇವರ ತಂದೆ ಯಾರು?” ಎಂದು ಕೇಳಿದನು. ಈ ಸಂಗತಿಯಿಂದ “ಸೌಲನು ಪ್ರವಾದಿಗಳಲ್ಲಿದ್ದಾನೆ” ಎಂಬ ವಿಷಯ ಹುಟ್ಟಿತು.
Kannada BSI Bible 2016
ಅದಕ್ಕೆ ಅಲ್ಲಿಯವನೊಬ್ಬನು ಪ್ರತ್ಯುತ್ತರವಾಗಿ--ಇವರ ತಂದೆ ಯಾರು ಅಂದನು. ಆದದರಿಂದ ಸೌಲನು ಸಹ ಪ್ರವಾದಿಗಳಲ್ಲಿ ಇದ್ದಾನೋ ಎಂಬ ಸಾಮತಿ ಉಂಟಾ ಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸ್ಥಳದವನೊಬ್ಬನು - ಹಾಗಾದರೆ ಇವರ ತಂದೆ ಯಾರು ಎಂದು ಕೇಳಿದನು. ಈ ಸಂಗತಿಯಿಂದ ಸೌಲನು ಪ್ರವಾದಿಗಳಲ್ಲಿದ್ದಾನೋ ಎಂಬ ಗಾದೆ ಹುಟ್ಟಿತು.
Kannada Bible (KNCL) BSI 2016
ಆಗ ಆ ಸ್ಥಳೀಯರಲ್ಲಿ ಒಬ್ಬನು, “ಹಾಗಾದರೆ ಇವರ ತಂದೆ ಯಾರು?” ಎಂದು ಕೇಳಿದನು. ಈ ಘಟನೆಯಿಂದಾಗಿ, “ಏನು, ಸೌಲನೂ ಪ್ರವಾದಿಯಾಗಿಬಿಟ್ಟನೊ?” ಎಂಬ ಗಾದೆ ಹುಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅಲ್ಲಿಯವನೊಬ್ಬನು, “ಹಾಗಾದರೆ ಅವರ ನಾಯಕರು ಯಾರು?” ಎಂದನು. ಆದ್ದರಿಂದ, “ಸೌಲನು ಸಹ ಪ್ರವಾದಿಗಳಲ್ಲಿ ಇದ್ದಾನೋ?” ಎಂಬ ಗಾದೆ ಉಂಟಾಯಿತು.