1 Samuel 10:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮುವೇಲನು ಅವರಿಗೆ, “ಇಸ್ರೇಲರ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಾನು ಇಸ್ರೇಲರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದೆನು. ನಾನು ಈಜಿಪ್ಟಿನವರ ಆಳ್ವಿಕೆಯಿಂದ ಮತ್ತು ನಿಮಗೆ ಹಾನಿಮಾಡಲು ಪ್ರಯತ್ನಿಸಿದ ಇತರ ರಾಜ್ಯಗಳಿಂದ ರಕ್ಷಿಸಿದೆನು’ ಎನ್ನುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರಿಗೆ, ಇಸ್ರಾಯೇಲ್ ದೇವರಾದ ಯೆಹೋವನು ಹೇಳುವುದನ್ನು ಕೇಳಿರಿ, “ನೀವು ಐಗುಪ್ತರ ಕೈಗೆ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನೂ, ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನೂ ನಾನೇ.
Kannada BSI Bible 2016
ನಾನು ನಿಮ್ಮನ್ನು ಐಗುಪ್ತ್ಯದಿಂದ ಬರಮಾಡಿ ಐಗುಪ್ತರ ಕೈಯಿಂದಲೂ ನಿಮ್ಮನ್ನು ಬಾಧೆಪಡಿಸಿದ ಸಮಸ್ತ ರಾಜ್ಯಗಳ ಕೈಯಿಂದಲೂ ಬಿಡಿಸಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಿಗೆ - ಇಸ್ರಾಯೇಲ್ ದೇವರಾದ ಯೆಹೋವನು ಹೇಳುವದನ್ನು ಕೇಳಿರಿ; ಆತನು ನಿಮಗೆ - ನೀವು ಐಗುಪ್ತ್ಯರ ಕೈಗೆ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನೂ ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನೂ ನಾನೇ.
Kannada Bible (KNCL) BSI 2016
ಅವರಿಗೆ, “ಇಸ್ರಯೇಲ್ ದೇವರಾದ ಸರ್ವೇಶ್ವರ ಹೇಳುವುದನ್ನು ಕೇಳಿರಿ: ‘ನೀವು ಈಜಿಪ್ಟಿನವರ ಕೈಯಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನು ಹಾಗು ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನು ನಾನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ, ನಿಮ್ಮನ್ನು ಈಜಿಪ್ಟಿನವರ ಕೈಯಿಂದಲೂ, ನಿಮ್ಮನ್ನು ಬಾಧೆಪಡಿಸಿದ ಸಮಸ್ತ ರಾಜ್ಯಗಳ ಕೈಯಿಂದಲೂ ಬಿಡಿಸಿದೆನು.’