1 Samuel 10:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮುವೇಲನು ಇಸ್ರೇಲಿನ ಎಲ್ಲಾ ಕುಲದವರನ್ನು ಹತ್ತಿರಕ್ಕೆ ಕರೆದನು. ನಂತರ ಸಮುವೇಲನು ಹೊಸ ರಾಜನನ್ನು ಆರಿಸಲು ಚೀಟು ಹಾಕತೊಡಗಿದನು. ಮೊದಲನೆಯದಾಗಿ, ಬೆನ್ಯಾಮೀನ್ ಕುಲವು ಆರಿಸಲ್ಪಟ್ಟಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮುವೇಲನು ಇಸ್ರಾಯೇಲ್ಯರ ಎಲ್ಲಾ ಕುಲಗಳನ್ನು ಸಮೀಪಕ್ಕೆ ಕರೆದಾಗ ಬೆನ್ಯಾಮೀನ್ ಕುಲಕ್ಕೆ ಚೀಟುಬಿದ್ದಿತು.
Kannada BSI Bible 2016
ಸಮುವೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸವಿಾಪಕ್ಕೆ ಬರ ಮಾಡಿದಾಗ ಬೆನ್ಯಾವಿಾನನ ಗೋತ್ರವು ಆರಿಸಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುವೇಲನು ಇಸ್ರಾಯೇಲ್ಯರ ಎಲ್ಲಾ ಕುಲಗಳನ್ನು ಸಮೀಪಕ್ಕೆ ಕರೆದಾಗ ಬೆನ್ಯಾಮೀನ್ ಕುಲಕ್ಕೆ ಚೀಟುಬಿದ್ದಿತು.
Kannada Bible (KNCL) BSI 2016
ಹೀಗೆ ಸಮುವೇಲನು ಇಸ್ರಯೇಲರ ಎಲ್ಲಾ ಕುಲಗಳನ್ನು ಸಮೀಪಕ್ಕೆ ಕರೆದಾಗ ಬೆನ್ಯಾಮೀನ್ ಕುಲಕ್ಕೆ ಚೀಟು ಬಿದ್ದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುಯೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸಮೀಪಕ್ಕೆ ಬರಮಾಡಿದಾಗ, ಬೆನ್ಯಾಮೀನನ ಗೋತ್ರಕ್ಕೆ ಚೀಟು ಬಿದ್ದಿತು.