1 Samuel 10:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮುವೇಲನು ಜನರಿಗೆ ರಾಜನೀತಿಯ ನಿಯಮಗಳನ್ನು ವಿವರಿಸಿದನು. ಅವನು ಒಂದು ಪುಸ್ತಕದಲ್ಲಿ ಆ ನಿಯಮಗಳನ್ನು ಬರೆದನು. ಅವನು ಯೆಹೋವನ ಸನ್ನಿಧಿಯಲ್ಲಿ ಆ ಪುಸ್ತಕವನ್ನಿಟ್ಟನು. ಬಳಿಕ ಸಮುವೇಲನು ಜನರನ್ನು ಮನೆಗಳಿಗೆ ಹಿಂದಿರುಗಲು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಯೆಹೋವನ ಸನ್ನಿಧಿಯಲ್ಲಿಟ್ಟನು. ಆ ಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.
Kannada BSI Bible 2016
ಸಮುವೇಲನು ರಾಜ್ಯದ ಪದ್ಧತಿ ಯನ್ನು ಜನರಿಗೆ ಹೇಳಿಕೊಟ್ಟು ಒಂದು ಪುಸ್ತಕದಲ್ಲಿ ಬರೆದು ಕರ್ತನ ಮುಂದೆ ಇಟ್ಟನು. ಆಗ ಸಮುವೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ ಅದನ್ನು ಒಂದು ಪುಸ್ತಕದಲ್ಲಿ ಬರೆದು ಯೆಹೋವನ ಸನ್ನಿಧಿಯಲ್ಲಿಟ್ಟನು; ಆಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.
Kannada Bible (KNCL) BSI 2016
ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಸರ್ವೇಶ್ವರನ ಸನ್ನಿಧಿಯಲ್ಲಿಟ್ಟನು; ಆಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುಯೇಲನು ರಾಜ್ಯದ ಪದ್ಧತಿಯನ್ನು ಜನರಿಗೆ ಹೇಳಿಕೊಟ್ಟು, ಒಂದು ಪುಸ್ತಕದಲ್ಲಿ ಬರೆದು, ಯೆಹೋವ ದೇವರ ಮುಂದೆ ಇಟ್ಟನು. ಆಗ ಸಮುಯೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು.