1 Samuel 10:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಮುವೇಲನು, “ನೀನು ಅಲ್ಲಿಂದ ಮುಂದೆ ಹೋಗುತ್ತಾ ತಾಬೋರಿನ ಹತ್ತಿರವಿರುವ ಒಂದು ದೊಡ್ಡ ಓಕ್ ವೃಕ್ಷದ ಬಳಿಗೆ ಬರುವೆ. ಅಲ್ಲಿ ನಿನ್ನನ್ನು ಮೂರು ಜನರು ಭೇಟಿಯಾಗುತ್ತಾರೆ. ಆ ಮೂರು ಜನರು ದೇವರ ಆರಾಧನೆಗಾಗಿ ಬೇತೇಲಿಗೆ ಹೋಗುತ್ತಿರುತ್ತಾರೆ. ಮೊದಲನೆಯವನು ಮೂರು ಮರಿ ಹೋತಗಳನ್ನೂ ಎರಡನೆಯವನು ಮೂರು ರೊಟ್ಟಿಗಳನ್ನೂ ಮೂರನೆಯವನು ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋಗುತ್ತಿರುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್‌ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನ್ನನ್ನು ಎದುರುಗೊಳ್ಳುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು.
Kannada BSI Bible 2016
ನೀನು ಆ ಸ್ಥಳವನ್ನು ಬಿಟ್ಟು ಆ ಕಡೆ ದಾಟಿ ತಾಬೋರಿನ ಬಯಲಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿ ಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನಗೆದುರಾಗುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು.
Kannada Bible (KNCL) BSI 2016
ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನಗೆದುರಾಗುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ಇರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಆ ಸ್ಥಳವನ್ನು ಬಿಟ್ಟು, ಆ ಕಡೆ ದಾಟಿ, ತಾಬೋರಿನ ಹತ್ತಿರವಿರುವ ಅಲ್ಲೋನ್ ವೃಕ್ಷದ ಬಳಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವೆ.