1 Samuel 11:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಮ್ಮೋನಿಯನಾದ ನಾಹಾಷನು ಒಂದು ತಿಂಗಳ ನಂತರ, ತನ್ನ ಸೈನ್ಯದೊಂದಿಗೆ ಯಾಬೇಷ್‌ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನ ಜನರೆಲ್ಲ ನಾಹಾಷನಿಗೆ, “ನೀನು ನಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುವುದಾದರೆ, ನಾವು ನಿನ್ನ ಸೇವೆಮಾಡುತ್ತೇವೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು.
Kannada BSI Bible 2016
ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಮ್ಮೋನಿಯನಾದ ನಾಹಾಷನು ಹೊರಟುಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆಹಾಕಲು ಯಾಬೇಷಿನವರು ಅವನನ್ನು - ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನ ಸೇವಕರಾಗಿರುವೆವು ಎಂದು ಬೇಡಿಕೊಂಡರು.
Kannada Bible (KNCL) BSI 2016
ಒಂದು ತಿಂಗಳ ನಂತರ ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಸಂಧಾನ ಮಾಡಿಕೋ; ನಾವು ನಿನಗೆ ಅಧೀನರಾಗಿರುತ್ತೇವೆ,” ಎಂದು ಬೇಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ಮುತ್ತಿಗೆಹಾಕಿದನು. ಆಗ ಯಾಬೇಷಿನ ಜನರೆಲ್ಲರು ನಾಹಾಷನಿಗೆ, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿದರೆ, ನಾವು ನಿನಗೆ ಅಧೀನರಾಗಿರುವೆವು,” ಎಂದರು.