1 Samuel 11:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಯಾಬೇಷಿನ ಜನರು ಅಮ್ಮೋನಿಯದ ನಾಹಾಷನಿಗೆ, “ನಾವು ನಾಳೆ ನಿನ್ನ ಬಳಿಗೆ ಬರುತ್ತೇವೆ. ಆಗ ನಿನಗೆ ತೋಚಿದ್ದನ್ನು ನಮಗೆ ಮಾಡು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಬಹಳವಾಗಿ ಸಂತೋಷಪಟ್ಟು ಅಮ್ಮೋನಿಯರಿಗೆ, “ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮಗೆ ಸರಿ ಕಾಣುವ ಪ್ರಕಾರ ಮಾಡಿರಿ” ಎಂದು ಹೇಳಿದರು.
Kannada BSI Bible 2016
ತರುವಾಯ ಯಾಬೇಷಿನ ಜನರು ನಾಹಾಷನಿಗೆ--ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನಿನಗೆ ಒಳ್ಳೇದಾಗಿ ತೋರುವದನ್ನೆಲ್ಲಾ ನಮಗೆ ಮಾಡು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಬಹಳವಾಗಿ ಸಂತೋಷಪಟ್ಟು ಅಮ್ಮೋನಿಯರಿಗೆ - ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮಗೆ ಸರಿಕಾಣುವ ಪ್ರಕಾರ ಮಾಡಿರಿ ಎಂದು ಹೇಳಿದರು.
Kannada Bible (KNCL) BSI 2016
ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಸಂತೋಷಭರಿತರಾದರು. ಅಮ್ಮೋನಿಯರಿಗೆ, “ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮ್ಮ ಇಚ್ಛೆಯ ಪ್ರಕಾರ ಮಾಡಬಹುದು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯಾಬೇಷಿನ ಜನರು ನಹಾಷನಿಗೆ, “ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನೀನು ನಿನಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ನಮಗೆ ಮಾಡು,” ಎಂದರು.