1 Samuel 11:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಾರನೆಯ ದಿನ ಬೆಳಿಗ್ಗೆ ಸೌಲನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಸೌಲನು ಮತ್ತು ಅವನ ಸೈನಿಕರು ಬೆಳಗಿನ ಜಾವದಲ್ಲೇ ಅಮ್ಮೋನಿಯರ ಶಿಬಿರದೊಳಕ್ಕೆ ನುಗ್ಗಿದರು. ಅವರು ಆ ದಿನ ಬೆಳಗಿನ ಜಾವ ಶಿಬಿರ ರಕ್ಷಕರನ್ನು ಬದಲಾಯಿಸುತ್ತಿದ್ದಂತೆಯೇ ಸೌಲನು ಆಕ್ರಮಣ ಮಾಡಿದನು. ಸೌಲನು ಮತ್ತು ಅವನ ಸೈನಿಕರು ನಡುಮಧ್ಯಾಹ್ನದೊಳಗೆ ಅಮ್ಮೋನಿಯರನ್ನು ಸೋಲಿಸಿದರು. ಅಮ್ಮೋನಿಯ ಸೈನಿಕರೆಲ್ಲರೂ ದಿಕ್ಕುಪಾಲಾಗಿ ಓಡಿಹೋದರು; ಅವರು ಒಟ್ಟಾಗಿ ಸೇರಿಬರಲು ಸಾಧ್ಯವಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು.
Kannada BSI Bible 2016
ಆದರೆ ಮಾರನೇ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ ಬೆಳಗಿನ ಜಾವ ದಂಡಿನಲ್ಲಿ ಬಂದು ಬಿಸಿಲೇರುವವರೆಗೆ ಅಮ್ಮೋನಿಯ ರನ್ನು ಸಂಹರಿಸಿದನು. ಉಳಿದವರು ಚದರಿಹೋದರು; ಅವರಲ್ಲಿ ಒಬ್ಬರೂ ಕೂಡ ಇರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಪಾಲು ಮಾಡಿ ಅಮ್ಮೋನಿಯರ ಪಾಳೆಯದೊಳಕ್ಕೆ ನುಗ್ಗಿ ಅವರನ್ನು ಮಧ್ಯಾಹ್ನದವರೆಗೆ ಹತಮಾಡಿದನು; ಉಳಿದವರನ್ನು ಒಬ್ಬರನ್ನೊಬ್ಬರು ಕೂಡದ ಹಾಗೆ ಚದರಿಸಿಬಿಟ್ಟನು.
Kannada Bible (KNCL) BSI 2016
ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಪಂಗಡವಾಗಿ ವಿಂಗಡಿಸಿದನು. ಅಮ್ಮೋನಿಯರ ಪಾಳೆಯದೊಳಕ್ಕೆ ನುಗ್ಗಿ ದಾಳಿಮಾಡಿ ಮಧ್ಯಾಹ್ನದವರೆಗೆ ಅವರನ್ನು ಸದೆಬಡಿದನು. ಅಳಿದುಳಿದವರನ್ನು ಒಬ್ಬರನ್ನೊಬ್ಬರು ಕೂಡದ ಹಾಗೆ ಚದರಿಸಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾರನೆಯ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ, ಬೆಳಗಿನ ಜಾವದಲ್ಲಿ ಪಾಳೆಯದಲ್ಲಿ ಬಂದು, ಬಿಸಿಲೇರುವವರೆಗೆ ಅಮ್ಮೋನಿಯರನ್ನು ಸಂಹರಿಸಿದನು. ಉಳಿದವರು ಚದರಿಹೋದರು. ಅವರಲ್ಲಿ ಒಬ್ಬರು ಕೂಡ ಇರಲಿಲ್ಲ.