1 Samuel 11:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತರುವಾಯ ಜನರೆಲ್ಲರು ಸಮುವೇಲನಿಗೆ, “ಸೌಲನು ರಾಜನಾಗಿ ಆಳುವುದು ಬೇಕಿಲ್ಲ ಎಂದು ಹೇಳಿದ್ದ ಜನರೆಲ್ಲ ಎಲ್ಲಿ ಹೋದರು? ಅವರನ್ನು ನಮಗೆ ಒಪ್ಪಿಸಿ, ನಾವು ಅವರನ್ನು ಕೊಂದುಹಾಕುತ್ತೇವೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದು ಎಂದು ಹೇಳಿದವರು ಯಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ” ಎಂದರು.
Kannada BSI Bible 2016
ಆಗ ಜನರು ಸಮುವೇಲನಿಗೆ--ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ; ಅವರನ್ನು ಕೊಂದು ಹಾಕುತ್ತೇವೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಜನರು ಸಮುವೇಲನಿಗೆ - ಸೌಲನು ನಮಗೆ ಅರಸನಾಗಬಾರದೆಂದು ಹೇಳಿದವರಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ ಎನ್ನಲು ಸೌಲನು ಅವರಿಗೆ -
Kannada Bible (KNCL) BSI 2016
ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದೆಂದು ಹೇಳಿದವರಾರು? ಅವರನ್ನು ನಮಗೆ ಒಪ್ಪಿಸಿರಿ; ನಾವೇ ಕೊಂದುಹಾಕುತ್ತೇವೆ,” ಎಂದರು. ಸೌಲನು ಅವರಿಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಜನರು ಸಮುಯೇಲನಿಗೆ, “ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರ‍್ಯಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ, ಅವರನ್ನು ಕೊಂದು ಹಾಕುತ್ತೇವೆ,” ಎಂದರು.