1 Samuel 11:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಸೌಲನು, “ಯೆಹೋವನು ಇಸ್ರೇಲನ್ನು ರಕ್ಷಿಸಿದ್ದಾನೆ. ಈ ದಿನ ಯಾರನ್ನೂ ಕೊಲ್ಲುವುದು ಬೇಡ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನು ಅವರಿಗೆ, “ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು.
Kannada BSI Bible 2016
ಆಗ ಸೌಲನು--ಕರ್ತನು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನುಂಟುಮಾಡಿ ದ್ದರಿಂದ ಈ ಹೊತ್ತು ಯಾವನೂ ಕೊಲ್ಲಲ್ಪಡಬಾರದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಈ ಹೊತ್ತು ಇಸ್ರಾಯೇಲ್ಯರಿಗೆ ಜಯವನ್ನುಂಟುಮಾಡಿರುವದರಿಂದ ಯಾರನ್ನೂ ಕೊಲ್ಲಬಾರದು ಎಂದು ಹೇಳಿದನು.
Kannada Bible (KNCL) BSI 2016
“ಸರ್ವೇಶ್ವರ ಈ ದಿನ ಇಸ್ರಯೇಲರಿಗೆ ಜಯವನ್ನುಂಟುಮಾಡಿರುವರು. ಆದ್ದರಿಂದ ಯಾರನ್ನೂ ಕೊಲ್ಲಬಾರದು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನು, “ಯೆಹೋವ ದೇವರು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನು ಉಂಟುಮಾಡಿದ್ದರಿಂದ, ಈ ಹೊತ್ತು ಯಾರನ್ನೂ ಕೊಲ್ಲಬಾರದು,” ಎಂದನು.