1 Samuel 11:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಸಮುವೇಲನು, “ನಾವೆಲ್ಲ ಗಿಲ್ಗಾಲಿಗೆ ಹೋಗಿ ಸೌಲನನ್ನು ಮತ್ತೆ ರಾಜನನ್ನಾಗಿ ಮಾಡೋಣ” ಎಂದು ಜನರಿಗೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮುವೇಲನು ಜನರಿಗೆ, “ಬನ್ನಿರಿ; ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಸ್ಥಿರಪಡಿಸೋಣ” ಅನ್ನಲು
Kannada BSI Bible 2016
ಆಗ ಸಮುವೇಲನು ಜನರಿಗೆ--ನಾವು ಗಿಲ್ಗಾಲಿಗೆ ಹೋಗಿ ಅಲ್ಲಿ ರಾಜ್ಯವನ್ನು ನೂತನಪಡಿ ಸೋಣ ಬನ್ನಿರಿ ಅಂದನು.ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುವೇಲನು ಜನರಿಗೆ - ಬನ್ನಿರಿ; ಗಿಲ್ಗಾಲಿಗೆ ಹೋಗಿ ಅರಸುತನವನ್ನು ಸ್ಥಿರಪಡಿಸೋಣ ಅನ್ನಲು
Kannada Bible (KNCL) BSI 2016
ಸಮುವೇಲನು ಜನರಿಗೆ, “ಬನ್ನಿ, ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಘೋಷಿಸೋಣ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಮುಯೇಲನು ಜನರಿಗೆ, “ನಾವು ಗಿಲ್ಗಾಲಿಗೆ ಹೋಗಿ, ಅಲ್ಲಿ ರಾಜ್ಯತ್ವವನ್ನು ದೃಢೀಕರಿಸೋಣ ಬನ್ನಿರಿ,” ಎಂದನು.