1 Samuel 11:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರೆಲ್ಲ ಗಿಲ್ಗಾಲಿಗೆ ಹೋದರು. ಅಲ್ಲಿ ಯೆಹೋವನ ಸಮ್ಮುಖದಲ್ಲಿ ಜನರೆಲ್ಲ ಸೌಲನನ್ನು ರಾಜನನ್ನಾಗಿ ಮಾಡಿದರು. ಅವರೆಲ್ಲರು ಯೆಹೋವನಿಗೆ ಸಮಾಧಾನಯಜ್ಞಗಳನ್ನು ಅರ್ಪಿಸಿದರು. ಸೌಲನು ಮತ್ತು ಇಸ್ರೇಲರೆಲ್ಲಾ ಒಂದು ದೊಡ್ಡ ಉತ್ಸವವನ್ನೇ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ, ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ಸೌಲನೊಡನೆ ಬಹಳವಾಗಿ ಆನಂದಿಸಿದರು.
Kannada BSI Bible 2016
ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ ಯೆಹೋವನಿಗೆ ಸಮಾಧಾನಯಜ್ಞಗಳನ್ನು ಸಮರ್ಪಿಸಿ ಸೌಲನೊಡನೆ ಬಹಳವಾಗಿ ಆನಂದಿಸಿದರು.
Kannada Bible (KNCL) BSI 2016
ಅವರೆಲ್ಲರು ಅಲ್ಲಿಗೆ ಹೋಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಘೋಷಿಸಿ ಸ್ಥಿರಪಡಿಸಿದರು. ಸರ್ವೇಶ್ವರನಿಗೆ ಶಾಂತಿಸಮಾಧಾನದ ಬಲಿಗಳನ್ನು ಸಮರ್ಪಿಸಿದರು. ಸೌಲನೊಡನೆ ಸೇರಿ ಬಹಳವಾಗಿ ಆನಂದಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ, ಆ ಸ್ಥಳದಲ್ಲಿ ಯೆಹೋವ ದೇವರ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ, ಯೆಹೋವ ದೇವರಿಗೆ ಸಮಾಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲರೂ ಬಹಳವಾಗಿ ಸಂತೋಷಪಟ್ಟರು.