1 Samuel 11:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಬೇಷಿನ ಹಿರಿಯರು ನಾಹಾಷನಿಗೆ, “ನಮಗೆ ಏಳು ದಿನಗಳವರೆಗೆ ಸಮಯ ಕೊಡು. ನಾವು ಇಸ್ರೇಲಿನ ಎಲ್ಲಾ ಕಡೆಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ರಕ್ಷಿಸಲು ಯಾರೂ ಬರದಿದ್ದರೆ ನಾವೆಲ್ಲ ನಿನ್ನ ಬಳಿಗೆ ಬರುತ್ತೇವೆ ಹಾಗೂ ನಿನಗೆ ಅಧೀನರಾಗುತ್ತೇವೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿನಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ, ನಾವು ನಿನ್ನ ಬಳಿಗೆ ಹೊರಟು ಬಂದು ನಿನಗೆ ಅಧೀನರಾಗುತ್ತೇವೆ” ಎಂದು ತಿಳಿಸಿದರು.
Kannada BSI Bible 2016
ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ--ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು. ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯಾಬೇಷಿನ ಹಿರಿಯರು ಅವನಿಗೆ - ಏಳು ದಿವಸಗಳವರೆಗೆ ತಡೆ; ಅಷ್ಟರೊಳಗೆ ನಾವು ಇಸ್ರಾಯೇಲ್ಯರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ ನಾವು ನಿನ್ನ ಬಳಿಗೆ ಹೊರಟುಬರುವೆವು ಎಂದು ತಿಳಿಸಿದರು.
Kannada Bible (KNCL) BSI 2016
ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿವಸಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಯೇಲರ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ ನಾವು ನಿನ್ನ ಬಳಿಗೆ ಬಂದು ಶರಣಾಗುತ್ತೇವೆ,” ಎಂದು ವಿನಂತಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ, “ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಅವಕಾಶವನ್ನು ಕೊಡು. ನಮ್ಮನ್ನು ರಕ್ಷಿಸುವವರು ಯಾರೂ ಇಲ್ಲದೆ ಹೋದರೆ, ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು,” ಎಂದರು.