1 Samuel 11:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನು ವಾಸವಾಗಿದ್ದ ಗಿಬೆಯಕ್ಕೆ ಸಂದೇಶಕರು ಬಂದು ಜನರಿಗೆ ಸುದ್ದಿಯನ್ನು ತಿಳಿಸಿದರು. ಜನರು ಗಟ್ಟಿಯಾಗಿ ಅತ್ತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು.
Kannada BSI Bible 2016
ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ಈ ವರ್ತಮಾನವನ್ನು ತಿಳಿಸಲು ಎಲ್ಲರೂ ಗಟ್ಟಿಯಾಗಿ ಅಳತೊಡಗಿದರು.
Kannada Bible (KNCL) BSI 2016
ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ಈ ವರ್ತಮಾನವನ್ನು ತಿಳಿಸಿದರು. ಎಲ್ಲರೂ ಗಟ್ಟಿಯಾಗಿ ಅಳತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರಿಗೆ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಸ್ವರವನ್ನೆತ್ತಿ ಅತ್ತರು.