1 Samuel 11:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನು ಹಸುಗಳನ್ನು ಹೊಡೆದುಕೊಂಡು ಹೊಲಕ್ಕೆ ಹೋಗಿದ್ದನು. ಸೌಲನು ಹೊಲದಿಂದ ಬಂದಾಗ ಜನರೆಲ್ಲ ಅಳುವುದು ಕೇಳಿಸಿತು. ಸೌಲನು, “ಏನಾಯಿತು? ಜನರು ಅಳುತ್ತಿರುವುದೇಕೆ? ಎಂದು ಕೇಳಿದನು. ಆಗ ಜನರೆಲ್ಲ ಯಾಬೇಷಿನ ಸಂದೇಶಕರು ಹೇಳಿದ್ದನ್ನೆಲ್ಲ ಸೌಲನಿಗೆ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು, “ಜನರು ಗೋಳಾಡುವುದಕ್ಕೆ ಕಾರಣವೇನು?” ಎಂದು ಕೇಳಲು ಅವರು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು.
Kannada BSI Bible 2016
ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು--ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು - ಜನರು ಗೋಳಾಡುವದಕ್ಕೇನು ಕಾರಣವೆಂದು ಕೇಳಲು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು.
Kannada Bible (KNCL) BSI 2016
ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಜನರು ಗೋಳಾಡುವುದಕ್ಕೇನು ಕಾರಣವೆಂದು ಕೇಳಲು ಯಾಬೇಷಿನವರ ವರ್ತಮಾನವನ್ನು ಅವನಿಗೆ ತಿಳಿಸಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು, “ಜನರು ಅಳುವುದೇಕೆ?” ಎಂದು ಕೇಳಿದನು. ಅವರು ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.