1 Samuel 12:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಿಮ್ಮ ಪೂರ್ವಿಕರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟು, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಸುಳ್ಳುದೇವರಾದ ಬಾಳನ ಮತ್ತು ಸುಳ್ಳುದೇವತೆಯಾದ ಅಷ್ಟೋರೆತಳ ಸೇವೆ ಮಾಡಿ ಪಾಪಮಾಡಿದ್ದೇವೆ. ಆದರೆ ಈಗ ನಮ್ಮನ್ನು ಶತ್ರುಗಳಿಂದ ರಕ್ಷಿಸು; ಆಗ ನಾವು ನಿನ್ನ ಸೇವೆಮಾಡುತ್ತೇವೆ’ ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ಯೆಹೋವನಿಗೆ, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು’ ಎಂದು ಮೊರೆಯಿಟ್ಟರು.
Kannada BSI Bible 2016
ಇವರು ಅವರ ಸಂಗಡ ಯುದ್ಧಮಾಡಿದರು. ಆದದರಿಂದ ಅವರು ಕರ್ತನಿಗೆ ಮೊರೆಯಿಟ್ಟು--ನಾವು ಕರ್ತನಾದ ನಿನ್ನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀನು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸು, ನಾವು ನಿನ್ನನ್ನು ಸೇವಿಸು ವೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರು ಆತನಿಗೆ - ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು ಎಂದು ಮೊರೆಯಿಟ್ಟರು.
Kannada Bible (KNCL) BSI 2016
ಆಗ ಅವರು, “ನಾವು ಸರ್ವೇಶ್ವರನಾದ ನಿಮ್ಮನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸಿರಿ; ನಾವು ಇನ್ನು ಮುಂದೆ ನಿಮ್ಮನ್ನೇ ಪೂಜಿಸಿ, ಸೇವೆಮಾಡುತ್ತೇವೆ,” ಎಂದು ಮೊರೆಯಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಅವರ ಸಂಗಡ ಯುದ್ಧಮಾಡಿದರು. ಆದ್ದರಿಂದ ಅವರು ಯೆಹೋವ ದೇವರಿಗೆ ಮೊರೆಯಿಟ್ಟು, ‘ನಾವು ಯೆಹೋವ ದೇವರಾದ ನಿಮ್ಮನ್ನು ಬಿಟ್ಟು ಬಾಳನನ್ನೂ, ಅಷ್ಟೋರೆತನನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀವು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸಿರಿ; ನಾವು ನಿಮ್ಮ ಸೇವೆ ಮಾಡುವೆವು,’ ಎಂದರು.