1 Samuel 12:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ನಿರಂತರವಾಗಿ ರಕ್ಷಿಸುತ್ತಾನೆ. ಆದರೆ ನೀವು ಈ ಕಾರ್ಯಗಳನ್ನು ಮಾಡಿದರೆ ಮಾತ್ರ ದೇವರು ನಿಮ್ಮನ್ನು ರಕ್ಷಿಸುತ್ತಾನೆ: ನೀವು ಯೆಹೋವನನ್ನು ಗೌರವಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನ ಆಜ್ಞೆಗಳನ್ನು ವಿರೋಧಿಸಬಾರದು. ನಿಮ್ಮ ದೇವರಾದ ಯೆಹೋವನ ಮಾರ್ಗವನ್ನು ನೀವು ಮತ್ತು ನಿಮ್ಮನ್ನು ಆಳುವ ರಾಜನು ಅನುಸರಿಸಬೇಕು. ನೀವು ಈ ಕಾರ್ಯಗಳನ್ನು ಮಾಡಿದಾಗ ದೇವರು ನಿಮ್ಮನ್ನು ರಕ್ಷಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವೂ, ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ಆತನಿಗೆ ವಿಧೇಯರಾಗಿ, ಆತನನ್ನು ಸೇವಿಸುತ್ತಾ, ತಪ್ಪದೆ ಆತನ ಮಾತನ್ನು ಪಾಲಿಸುವವರಾಗಿ, ಆತನನ್ನೇ ಹೊಂದಿಕೊಂಡಿರುವುದಾದರೆ ಎಷ್ಟೋ ಒಳ್ಳೆಯದು.
Kannada BSI Bible 2016
ನೀವು ಕರ್ತನ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಕರ್ತನಿಗೆ ಭಯಪಟ್ಟು ಆತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾದರೆ ನೀವೂ ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಕರ್ತನನ್ನು ತಪ್ಪದೆ ಹಿಂಬಾಲಿಸುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವೂ ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು ವಿಧೇಯರಾಗಿ ಆತನನ್ನು ಸೇವಿಸುತ್ತಾ ತಪ್ಪದೆ ಆತನ ಮಾತು ಕೇಳುವವರಾಗಿ ಆತನನ್ನೇ ಹೊಂದಿಕೊಂಡಿರುವದಾದರೆ ಎಷ್ಟೋ ಒಳ್ಳೇದು.
Kannada Bible (KNCL) BSI 2016
ನೀವೂ ನಿಮ್ಮ ಅರಸನೂ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೆ ವಿಧೇಯರಾಗಿ ಅವರನ್ನೇ ಪೂಜಿಸಿರಿ; ಅವರ ಮಾತನ್ನು ತಪ್ಪದೆ ಪಾಲಿಸುತ್ತಾ ಅವರನ್ನೇ ಹೊಂದಿಕೊಂಡಿರಿ. ಹೀಗೆ ಮಾಡಿದರೆ ಎಷ್ಟೋ ಒಳ್ಳೆಯದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಯೆಹೋವ ದೇವರ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಯೆಹೋವ ದೇವರಿಗೆ ಭಯಪಟ್ಟು ಅವರನ್ನು ಸೇವಿಸಿ, ಅವರ ಮಾತಿಗೆ ವಿಧೇಯರಾದರೆ ನೀವೂ, ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಯೆಹೋವ ದೇವರನ್ನು ತಪ್ಪದೆ ಹಿಂಬಾಲಿಸುವಿರಿ.