1 Samuel 12:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ಗೋಧಿಯ ಸುಗ್ಗಿಕಾಲ. ನಾನು ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ. ಆತನು ಗುಡುಗನ್ನು ಮತ್ತು ಮಳೆಯನ್ನು ಕಳುಹಿಸಲೆಂದು ನಾನು ಪ್ರಾರ್ಥಿಸುತ್ತೇನೆ. ರಾಜನು ಬೇಕೆಂದು ನೀವು ಕೇಳಿದ್ದು ಯೆಹೋವನಿಗೆ ವಿರುದ್ಧವಾಗಿ ನೀವು ಮಾಡಿದ ಎಂತಹ ಕೆಟ್ಟಕಾರ್ಯವಾಗಿದೆ ಎಂಬದನ್ನು ನಿಮಗೇ ತಿಳಿಯುತ್ತದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ, ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ತಪ್ಪು ಎಂಬುದನ್ನು ತೋರಿಸಿಕೊಡುವನು” ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಟ್ಟನು.
Kannada BSI Bible 2016
ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದ ರಿಂದ ಕರ್ತನ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತ ನವು ಹೆಚ್ಚಾಗಿದೆ ಎಂದು ತಿಳುಕೊಂಡು ನೋಡುವ ಹಾಗೆ ನಾನು ಕರ್ತನಿಗೆ ಮೊರೆಯಿಡುವೆನು; ಆಗ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬದನ್ನು ತೋರಿಸಿಕೊಡುವನು ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಡಲು
Kannada Bible (KNCL) BSI 2016
ನಾನು ಸರ್ವೇಶ್ವರನಿಗೆ ಮೊರೆಯಿಡುತ್ತೇನೆ; ಈಗ ಗೋದಿಯ ಸುಗ್ಗಿಕಾಲವಾಗಿದ್ದರೂ ಗುಡುಗನ್ನೂ ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತಮ್ಮ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬುದನ್ನು ಅವರು ತೋರಿಸಿಕೊಡುವರು,” ಎಂದು ಅವರಿಗೆ ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದರಿಂದ, ಯೆಹೋವ ದೇವರ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತನವು ಹೆಚ್ಚಾಗಿದೆ ಎಂದು ತಿಳಿದುಕೊಂಡು ನೋಡುವ ಹಾಗೆ, ನಾನು ಯೆಹೋವ ದೇವರಿಗೆ ಮೊರೆಯಿಡುವೆನು. ಆಗ ಅವರು ಗುಡುಗನ್ನೂ, ಮಳೆಯನ್ನೂ ಕಳುಹಿಸುವರು,” ಎಂದನು.