1 Samuel 12:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರೆಲ್ಲಾ ಸಮುವೇಲನಿಗೆ, “ನಿನ್ನ ಸೇವಕರಾದ ನಮಗಾಗಿ, ನಿನ್ನ ದೇವರಾದ ಯೆಹೋವನಲ್ಲಿ ಪ್ರಾರ್ಥಿಸು. ನಮ್ಮನ್ನು ಸಾಯಲು ಬಿಡಬೇಡ. ನಾವು ಅನೇಕ ಸಲ ಪಾಪಗಳನ್ನು ಮಾಡಿದ್ದೇವೆ. ಈಗ ನಾವು ರಾಜನನ್ನು ಕೇಳಿಕೊಂಡಿದ್ದು ನಮ್ಮ ಪಾಪಗಳೊಂದಿಗೆ ಮತ್ತೊಂದು ಪಾಪವನ್ನು ಮಾಡಿದಂತಾಯಿತು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಸೇರಿಕೊಂಡಿತು; ಆದ್ದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ” ಎಂದು ವಿಜ್ಞಾಪಿಸಲು
Kannada BSI Bible 2016
ಜನರೆಲ್ಲರು ಸಮುವೇಲನಿಗೆ--ನಾವು ಸಾಯದ ಹಾಗೆ ನಿನ್ನ ದೇವ ರಾದ ಕರ್ತನಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಯಾಕಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟತನ ವನ್ನು ಕೂಡಿಸಿದೆವೆಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪವು ಕೂಡಿತು; ಆದದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ ಎಂದು ವಿಜ್ಞಾಪಿಸಲು ಅವನು -
Kannada Bible (KNCL) BSI 2016
ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಕೂಡಿತು; ಆದುದರಿಂದ ನಿಮ್ಮ ಸೇವಕರಾದ ನಾವು ಸಾಯದಂತೆ ನಿಮ್ಮ ದೇವರಾದ ಸರ್ವೇಶ್ವರನನ್ನು ಬೇಡಿಕೊಳ್ಳಿ,” ಎಂದು ಸಮುವೇಲನನ್ನು ವಿಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರೆಲ್ಲರು ಸಮುಯೇಲನಿಗೆ, “ನಾವು ಸಾಯದ ಹಾಗೆ ನಿನ್ನ ದೇವರಾದ ಯೆಹೋವ ದೇವರಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಏಕೆಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ, ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟದ್ದನ್ನು ಕೂಡಿಸಿದ್ದೇವೆ,” ಎಂದು ಹೇಳಿದರು.