1 Samuel 12:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗ ನಿಮ್ಮನ್ನು ಮುನ್ನಡೆಸಲು ಒಬ್ಬ ರಾಜನಿದ್ದಾನೆ. ನಾನು ಮುದುಕನಾಗಿರುವೆ ಮತ್ತು ನನ್ನ ತಲೆ ನರೆತುಹೋಗಿದೆ. ನನ್ನ ಗಂಡುಮಕ್ಕಳು ನಿಮ್ಮೊಂದಿಗಿದ್ದಾರೆ. ನಾನು ಚಿಕ್ಕಂದಿನಿಂದಲೇ ನಿಮ್ಮ ನಾಯಕನಾಗಿದ್ದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನು ಮುಂದೆ ಇವನೇ ನಿಮ್ಮ ಅರಸನಾಗಿರುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮೊಂದಿಗಿದ್ದಾರೆ.
Kannada BSI Bible 2016
ಇಗೋ, ಆ ಅರಸನು ಇನ್ನು ಮುಂದೆ ನಿಮ್ಮನ್ನು ನಡಿಸುತ್ತಾನೆ. ಈಗ ನಾನು ತಲೆನರೆತ ಮುದುಕನಾಗಿದ್ದೇನೆ. ಇಗೋ, ನನ್ನ ಕುಮಾರರು ನಿಮ್ಮ ಸಂಗಡ ಇದ್ದಾರೆ. ನಾನು ನನ್ನ ಬಾಲ್ಯದಿಂದ ಈ ದಿನದ ವರೆಗೂ ನಿಮ್ಮ ಮುಂದೆ ನಡಕೊಂಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ಮುಂದೆ ಇವನೇ ನಿಮ್ಮನ್ನು ನಡಿಸುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮ ಮಧ್ಯದಲ್ಲಿದ್ದಾರೆ.
Kannada Bible (KNCL) BSI 2016
ಇನ್ನು ಇವನೇ ನಿಮ್ಮನ್ನು ಮುನ್ನಡೆಸುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮ ಮಧ್ಯದಲ್ಲಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಆ ಅರಸನು ಇನ್ನು ಮುಂದೆ ನಿಮ್ಮನ್ನು ನಡಿಸುತ್ತಾನೆ. ನಾನು ವೃದ್ಧನಾಗಿ ನರೆ ಬಂದವನಾದೆನು. ನನ್ನ ಪುತ್ರರು ನಿಮ್ಮ ಸಂಗಡ ಇದ್ದಾರೆ. ನಾನು ನನ್ನ ಬಾಲ್ಯ ಮೊದಲ್ಗೊಂಡು ಈ ದಿನದವರೆಗೂ ನಿಮ್ಮ ಮುಂದೆ ನಾಯಕನಾಗಿ ನಡೆದುಕೊಂಡಿದ್ದೇನೆ.