1 Samuel 12:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಮುವೇಲನು, “ಭಯಪಡಬೇಡಿ. ಅದೇನೊ ನಿಜ. ನೀವು ಆ ಕೆಟ್ಟಕಾರ್ಯಗಳನ್ನೆಲ್ಲಾ ಮಾಡಿದಿರಿ. ಆದರೆ ಯೆಹೋವನ ಮಾರ್ಗದಲ್ಲಿ ನಡೆಯುವುದನ್ನು ನಿಲ್ಲಿಸದಿರಿ. ಯೆಹೋವನ ಸೇವೆಯನ್ನು ಪೂರ್ಣಹೃದಯದಿಂದ ಮಾಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು, “ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು, ಯೆಹೋವನನ್ನು ಅಂಟಿಕೊಂಡು, ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.
Kannada BSI Bible 2016
ಆಗ ಸಮು ವೇಲನು ಜನರಿಗೆ--ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ; ಆದರೂ ಕರ್ತನನ್ನು ಬಿಟ್ಟು ತಿರುಗದೆ ನಿಮ್ಮ ಪೂರ್ಣ ಹೃದಯದಿಂದ ಕರ್ತನನ್ನು ಸೇವಿಸಿರಿ. ಲಾಭಕರವಿಲ್ಲದಂಥವುಗಳನ್ನೂ ಬಿಡಿಸಲಾರದವುಗಳನ್ನೂ ವ್ಯರ್ಥವಾದವುಗಳನ್ನೂ ಅನುಸರಿಸುವದಕ್ಕೆ ಹೋಗಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು ಯೆಹೋವನನ್ನು ಅಂಟಿಕೊಂಡು ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.
Kannada Bible (KNCL) BSI 2016
ಆಗ ಸಮುವೇಲನು, “ಭಯಪಡಬೇಡಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆ ಆದರೂ ಅದನ್ನು ಬಿಟ್ಟು, ಸರ್ವೇಶ್ವರನನ್ನು ಹೊಂದಿಕೊಂಡು ಪೂರ್ಣಮನಸ್ಸಿನಿಂದ ಅವರೊಬ್ಬರನ್ನೇ ಪೂಜಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಮುಯೇಲನು ಜನರಿಗೆ, “ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ. ಆದರೂ ಯೆಹೋವ ದೇವರನ್ನು ಬಿಟ್ಟು ತಿರುಗದೆ, ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರನ್ನು ಸೇವಿಸಿರಿ.