1 Samuel 12:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀವು ಯೆಹೋವನನ್ನು ಗೌರವಿಸಬೇಕು. ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವನ ಸೇವೆಯನ್ನು ನಿಜವಾಗಿಯೂ ಮಾಡಬೇಕು. ಆತನು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಳ್ಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;
Kannada BSI Bible 2016
ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಂಡು ಆತನನ್ನು ಸತ್ಯದಿಂದಲೂ ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;
Kannada Bible (KNCL) BSI 2016
ನೀವಾದರೋ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಅವರು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಅವರಿಗೆ ಶ್ರದ್ಧೆಯಿಂದಲೂ ಪೂರ್ಣಮನಸ್ಸಿನಿಂದಲೂ ಸೇವೆಸಲ್ಲಿಸುತ್ತಾ ಬರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು ಯೆಹೋವ ದೇವರಿಗೆ ಭಯಪಟ್ಟು, ನಿಮ್ಮ ಪೂರ್ಣಹೃದಯದಿಂದ ನಂಬಿಗಸ್ತರಾಗಿ ಅವರನ್ನು ಸೇವಿಸಿರಿ. ಏಕೆಂದರೆ ಅವರು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದರೆಂದು ಆಲೋಚಿಸಿರಿ.