1 Samuel 12:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನು ಈಜಿಪ್ಟಿಗೆ ಹೋದನು. ತರುವಾಯ, ಈಜಿಪ್ಟಿನವರು ಅವನ ವಂಶದವರಿಗೆ ಜೀವನವನ್ನು ಕಠಿಣಗೊಳಿಸಿದರು. ಆದ್ದರಿಂದ ಅವರು ಯೆಹೋವನಲ್ಲಿ ಸಹಾಯಕ್ಕಾಗಿ ಮೊರೆಯಿಟ್ಟರು. ಯೆಹೋವನು ಮೋಶೆ ಆರೋನರನ್ನು ಕಳುಹಿಸಿದನು. ಮೋಶೆ ಆರೋನರು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದು ಇಲ್ಲಿ ನೆಲೆಗೊಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತಕ್ಕೆ ಬಂದ ಯಾಕೋಬನ ವಂಶದವರಾದ ನಿಮ್ಮ ಹಿರಿಯರು ಯೆಹೋವನಿಗೆ ಮೊರೆಯಿಟ್ಟಾಗ, ಆತನು ಮೋಶೆ ಆರೋನರ ಮುಖಾಂತರ ಅವರನ್ನು ಐಗುಪ್ತದಿಂದ ಬಿಡಿಸಿ ಈ ದೇಶದಲ್ಲಿ ನೆಲೆಗೊಳಿಸಿದನು.
Kannada BSI Bible 2016
ಯಾಕೋಬನು ಐಗುಪ್ತಕ್ಕೆ ಬಂದ ತರುವಾಯ ನಿಮ್ಮ ತಂದೆಗಳು ಕರ್ತ ನಿಗೆ ಮೊರೆಯಿಟ್ಟರು. ಆಗ ಕರ್ತನು ಮೋಶೆಯನ್ನೂ ಆರೋನನನ್ನೂ ಕಳುಹಿಸಿದನು. ಇವರು ನಿಮ್ಮ ತಂದೆ ಗಳನ್ನು ಐಗುಪ್ತದಿಂದ ಕರತಂದು ಅವರನ್ನು ಈ ದೇಶ ದಲ್ಲಿ ವಾಸಿಸುವಂತೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತಕ್ಕೆ ಬಂದ ಯಾಕೋಬನ ವಂಶದವರಾದ ನಮ್ಮ ಹಿರಿಯರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಮೋಶೆ ಆರೋನರ ಮುಖಾಂತರ ಅವರನ್ನು ಐಗುಪ್ತದಿಂದ ಬಿಡಿಸಿ ಈ ದೇಶದಲ್ಲಿ ನೆಲೆಗೊಳಿಸಿದನು.
Kannada Bible (KNCL) BSI 2016
ಈಜಿಪ್ಟಿಗೆ ಬಂದ ಯಕೋಬನ ವಂಶದವರಾದ ನಮ್ಮ ಹಿರಿಯರು ಸರ್ವೇಶ್ವರನಿಗೆ ಮೊರೆಯಿಟ್ಟಾಗ, ಅವರು ಮೋಶೆ ಹಾಗು ಆರೋನರ ಮುಖಾಂತರ ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದು ಈ ನಾಡಿನಲ್ಲಿ ನೆಲೆಗೊಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾಕೋಬನು ಈಜಿಪ್ಟಿಗೆ ಬಂದ ತರುವಾಯ, ನಿಮ್ಮ ತಂದೆಗಳು ಯೆಹೋವ ದೇವರಿಗೆ ಮೊರೆಯಿಟ್ಟರು. ಆಗ ಯೆಹೋವ ದೇವರು ಮೋಶೆಯನ್ನೂ, ಆರೋನನನ್ನೂ ಕಳುಹಿಸಿದರು. ಇವರು ನಿಮ್ಮ ಪಿತೃಗಳನ್ನು ಈಜಿಪ್ಟಿನಿಂದ ಕರೆತಂದು, ಅವರನ್ನು ಈ ದೇಶದಲ್ಲಿ ವಾಸಿಸುವಂತೆ ಮಾಡಿದರು.