1 Samuel 12:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಿಮ್ಮ ಪೂರ್ವಿಕರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟದ್ದರಿಂದ ಆತನು ಅವರನ್ನು ಸೀಸೆರನ ಗುಲಾಮರಾಗಲು ಬಿಟ್ಟುಬಿಟ್ಟನು. ಸೀಸೆರನು ಹಾಚೋರಿನ ಸೈನ್ಯಾಧಿಪತಿ. ನಂತರ ಯೆಹೋವನು ಅವರನ್ನು ಫಿಲಿಷ್ಟಿಯರ ಮತ್ತು ಮೋವಾಬ್ ರಾಜನ ಗುಲಾಮರಾಗುವಂತೆ ಬಿಟ್ಟುಬಿಟ್ಟನು. ಅವರೆಲ್ಲರು ನಿಮ್ಮ ವಂಶದವರ ವಿರುದ್ಧ ಹೋರಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಧಿಪತಿಯಾದ ಸೀಸೆರನಿಗೂ, ಫಿಲಿಷ್ಟಿಯರಿಗೂ, ಮೋವಾಬ್‌ ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು.
Kannada BSI Bible 2016
ಆದರೆ ಅವರು ತಮ್ಮ ದೇವರಾದ ಕರ್ತನನ್ನು ಮರೆತುಹೋದಾಗ ಆತನು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ ಫಿಲಿಷ್ಟಿಯರ ಕೈಗೂ ಮೋವಾಬ್ಯರ ಅರಸನ ಕೈಗೂ ಮಾರಿಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಪತಿಯಾದ ಸೀಸೆರನಿಗೂ ಫಿಲಿಷ್ಟಿಯರಿಗೂ ಮೋವಾಬ್‍ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು.
Kannada Bible (KNCL) BSI 2016
ಅವರು ತಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಆಗ ಅವರನ್ನು ಹಾಚೋರಿನ ಸೇನಾಪತಿಯಾದ ಸೀಸೆರನಿಗೂ ಫಿಲಿಷ್ಟಿಯರಿಗೂ ಮೋವಾಬ್ ರಾಜನಿಗೂ ಮಾರಿಬಿಡಲಾಯಿತು. ಇವರು ದಂಡೆತ್ತಿ ಬಂದು ಅವರೊಡನೆ ಯುದ್ಧಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ಅವರು ತಮ್ಮ ದೇವರಾದ ಯೆಹೋವ ದೇವರನ್ನು ಮರೆತು ಹೋದಾಗ, ದೇವರು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ, ಫಿಲಿಷ್ಟಿಯರಿಗೂ, ಮೋವಾಬ್ ರಾಜನಿಗೂ ಮಾರಿಬಿಟ್ಟರು.