1 Samuel 13:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನನ್ನಲ್ಲಿಯೇ ಯೋಚಿಸುತ್ತಾ, ‘ಫಿಲಿಷ್ಟಿಯರು ಇಲ್ಲಿಗೆ ಬಂದು ಗಿಲ್ಗಾಲಿನಲ್ಲಿ ನನ್ನ ಮೇಲೆ ಆಕ್ರಮಣ ಮಾಡುತ್ತಾರೆ. ನಮಗೆ ಸಹಾಯ ಮಾಡುವಂತೆ ನಾನು ದೇವರಲ್ಲಿ ಇನ್ನೂ ಪ್ರಾರ್ಥಿಸಿಲ್ಲ. ಆದ್ದರಿಂದ ನನ್ನಲ್ಲಿಯೇ ಆದ ಒತ್ತಡದಿಂದ ಸರ್ವಾಂಗಹೋಮವನ್ನು ಅರ್ಪಿಸಿದೆನು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು ‘ಫಿಲಿಷ್ಟಿಯರು ಗಿಲ್ಗಾಲಿನಲ್ಲಿರುವ ನನ್ನ ಬಳಿಗೆ ಬಂದು ನನ್ನ ಮೇಲೆ ಬಿದ್ದಾರು, ನಾನು ಯೆಹೋವನ ದಯೆಯನ್ನು ಬೇಡಿಕೊಳ್ಳಲಿಲ್ಲ’ ಎಂದು, ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಮುಂದಾದೆನು” ಅಂದನು.
Kannada BSI Bible 2016
ನಾನು ಕಂಡಿದ್ದರಿಂದ ಫಿಲಿಷ್ಟಿಯರು ಗಿಲ್ಗಾಲಿನಲ್ಲಿ ರುವ ನನ್ನ ಬಳಿಗೆ ಬರುವರು ಎಂದೂ ನಾನು ಕರ್ತನ ದಯೆ ಬೇಡಿಕೊಳ್ಳಲಿಲ್ಲವೆಂದೂ ಹೇಳಿ ಮುಂದಾಗಿ ದಹನಬಲಿಯನ್ನು ಅರ್ಪಿಸಿದೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಯೆಹೋವನಿಗೆ ಶಾಂತ್ಯರ್ಪಣೆಯನ್ನು ಸಲ್ಲಿಸುವದಕ್ಕಿಂತ ಮೊದಲೇ ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ಬಿದ್ದಾರೆಂದು ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವದಕ್ಕೆ ಮುಂಗೊಂಡೆನು ಅಂದನು.
Kannada Bible (KNCL) BSI 2016
ಸರ್ವೇಶ್ವರನಿಗೆ ಶಾಂತಿಸಮಾಧಾನದ ಬಲಿಯನ್ನು ಸಲ್ಲಿಸುವುದಕ್ಕಿಂತ ಮೊದಲೇ ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ಬಿದ್ದಾರೆಂದು ಭಯಪಟ್ಟೆ. ಆದುದರಿಂದ ದಹನಬಲಿಯನ್ನು ಸಮರ್ಪಿಸುವುದಕ್ಕೆ ನಾನೇ ಮುಂದಾದೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ನನ್ನಲ್ಲಿಯೇ ಯೋಚಿಸುತ್ತಾ, ‘ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ದಾಳಿಮಾಡುವುದು ಖಚಿತ ಮತ್ತು ನಾನು ಎಂದಿಗೂ ಯೆಹೋವ ದೇವರ ಸಹಾಯವನ್ನು ಕೇಳಲಿಲ್ಲ.’ ಆದ್ದರಿಂದ ನನ್ನಲ್ಲಿಯೇ ಆದ ಒತ್ತಡದಿಂದ ದಹನಬಲಿಯನ್ನು ಅರ್ಪಿಸಿದೆನು,” ಎಂದನು.