1 Samuel 13:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಈಗ ನಿನ್ನ ಆಳ್ವಿಕೆಯು ಮುಂದುವರಿಯುವುದಿಲ್ಲ. ಯೆಹೋವನು ತನಗೆ ವಿಧೇಯನಾಗಿರುವಂತಹ ಮನುಷ್ಯನಿಗಾಗಿ ಹುಡುಕುತ್ತಿದ್ದನು. ಯೆಹೋವನಿಗೆ ಅಂತಹ ಮನುಷ್ಯನು ಸಿಕ್ಕಿದ್ದಾನೆ. ತನ್ನ ಜನರನ್ನು ಆಳಲು ಯೆಹೋವನು ಅವನನ್ನು ಹೊಸ ನಾಯಕನನ್ನಾಗಿ ನೇಮಿಸುತ್ತಾನೆ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಲಿಲ್ಲ. ಆದ್ದರಿಂದ ಯೆಹೋವನು ಹೊಸ ನಾಯಕನನ್ನು ಆರಿಸಿಕೊಳ್ಳುವನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು.
Kannada BSI Bible 2016
ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗಲಾದರೋ ನಿನ್ನ ಅರಸುತನವು ನಿಲ್ಲುವದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆಹೋದದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇವಿುಸಿದ್ದಾನೆ ಎಂದು ಹೇಳಿದನು.
Kannada Bible (KNCL) BSI 2016
ಈಗಲಾದರೋ, ನಿನ್ನ ಅರಸುತನ ನಿಲ್ಲುವುದಿಲ್ಲ; ನೀನು ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳದೆ ಹೋದುದರಿಂದ ಅವರು ತಮಗೆ ಒಪ್ಪಿಗೆಯಾದ ಬೇರೊಬ್ಬ ವ್ಯಕ್ತಿಯನ್ನು ತಮ್ಮ ಪ್ರಜೆಯ ಮೇಲೆ ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದನ್ನು ನೀನು ಕೈಗೊಳ್ಳದೆ ಹೋದದ್ದರಿಂದ, ಅವರು ತಮ್ಮ ಹೃದಯಕ್ಕೆ ತಕ್ಕಂಥ ಒಬ್ಬ ಮನುಷ್ಯನನ್ನು ಹುಡುಕಿ, ಅವನನ್ನು ತಮ್ಮ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾರೆ,” ಎಂದನು.